ಅಗತ್ಯ ಸೇವೆಯಡಿ ಮತದಾನಕ್ಕೆ 688 ಮಂದಿ ನೋಂದಣಿಲೋಕಸಭಾ ಚುನಾವಣೆ ನಡೆಯುತ್ತಿದ್ದು, ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಮತದಾನದಿಂದ ದೂರ ಉಳಿಯಬಾರದು. ಈ ವರ್ಗದ ಮತದಾರರಿಗೆ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮತ್ತು ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ನೀಡಿದೆ. ಅಗತ್ಯ ಸೇವೆಯಡಿ ದಾವಣಗೆರೆ ಕ್ಷೇತ್ರಕ್ಕೆ ಮತದಾನ ಮಾಡಲು 688 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.