ವಿಶೇಷಚೇತನರು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕುಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ 7ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ.100ರಷ್ಟು ಮತದಾನ ಮಾಡಬೇಕು. ವಿಶೇಷಚೇತನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.97ರಷ್ಟು ಮನತದಾನ ಮಾಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡುವ ವಿಶ್ವಾಸವಿದೆ ಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ದಾವಣಗೆರೆಯಲ್ಲಿ ಹೇಳಿದ್ದಾರೆ.