ಎಸ್ಎಸ್ಎಲ್ಸಿ ಪರೀಕ್ಷೆ: ಜಿಲ್ಲೆಯಲ್ಲಿ 20856 ಮಂದಿ ಹಾಜರುಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು, ಮಾ.25ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆಯಿತು. 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 10277 ಗಂಡು, 10729 ಹೆಣ್ಣು ಸೇರಿ 21006 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ 10188 ಬಾಲಕರು, 10668 ಬಾಲಕಿಯರು ಸೇರಿ 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 150 ವಿದ್ಯಾರ್ಥಿಗಳು ಗೈರಾಗಿದ್ದರು.