ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಅನ್ಯಾಯ: ಎಚ್.ಕೆ.ಮೂರ್ತಿ ಆರೋಪರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಪ್ರಸಕ್ತ ಸಾಲಿನಲ್ಲಿ ನಾಮ ನಿರ್ದೇಶನದ ಮೂಲಕ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡಿ, ಆದೇಶ ಹೊರಡಿಸಿದೆ. ಐವರು ನಾಮ ನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಎಸ್ಸಿ, ಓರ್ವ ಎಸ್ಟಿ, ಮೂವರು ಸಾಮಾನ್ಯ ವರ್ಗಕ್ಕೆ ಸೇರಿದ ಪುರುಷ-ಮಹಿಳೆಯರನ್ನು ಆಯ್ಕೆ ಮಾಡಬೇಕೆಂಬ ನಿಯಮವೇ ಇದೆ.