108 ಈಡುಗಾಯಿ ಒಡೆದು ಹರಕೆ ತೀರಿಸಿದ ಕಾಂಗ್ರೆಸ್ಸಿಗರುಲೋಕಸಭೆ ಚುನಾವಣೆಯಲ್ಲಿ 25 ವರ್ಷದ ನಂತರ ಕಾಂಗ್ರೆಸ್ ಪಕ್ಷ ಜಯ ಸಾಧಿಸಿದೆ. ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಪಕ್ಷದ ಹಿರಿಯ ಮುಖಂಡರಾದ ಮಟ್ಟಿಕಲ್ಲು ವೀರಭದ್ರಸ್ವಾಮಿ, ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ ನೇತೃತ್ವದಲ್ಲಿ ನಗರದ ಹಳೇ ಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ 108 ಈಡುಗಾಯಿ ಒಡೆಯುವ ಮೂಲಕ ಹರಕೆ ತೀರಿಸಲಾಯಿತು.