ನ್ಯಾಯಾಧೀಶರ ಭೇಟಿ: ಸುಸ್ಥಿತಿ ಕಂಡ ಅಂಗನವಾಡಿ ಕೇಂದ್ರಗಳುದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ್ ಮ. ಕರೆಣ್ಣವರ ಜುಲೈ 22ರಂದು ಆಜಾದ್ ನಗರದ ವೆಂಕಾಭೋವಿ ಕಾಲನಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲಿನ ಸ್ಥಿತಿಗತಿ ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಇಲಾಖೆ ಕ್ರಮ ಕೈಗೊಂಡಿದೆ.