ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲೂ ವೈಫಲ್ಯ: ರಾಜಶೇಖರ ನಾಗಪ್ಪರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳು ಮುಚ್ಚುತ್ತಿವೆ. ಟ್ಯಾಂಕರ್ ನೀರಿನ ಮಾಫಿಯಾಗೆ ಜೊತೆಯಾಗಿ ನೀರಿನ ಬೆಲೆ ದುಪ್ಪಟ್ಟು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸದೇ, ಉದ್ಯಮಗಳು ಬಾಗಿಲು ಮುಚ್ಚಿ, ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾರೆ. ಶೋಷಿತ, ಪೀಡಿತ, ವಂಚಿತ ತಳ ಸಮುದಾಯಗಳ ಮೇಲಿನ ನಿರಂತರ ಅನ್ಯಾಯ ಮುಂದುವರಿದಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ.