ದಾವಣಗೆರೆ ಜಿಲ್ಲೆಯ ನಿರೀಕ್ಷೆ ಹುಸಿಗೊಳಿಸಿದ ರಾಜ್ಯ ಬಜೆಟ್ಹೊನ್ನಾಳಿ, ಚನ್ನಗಿರಿ ತಾಲೂಕಿನ ಕೆರೆಗಳನ್ನು ತುಂಬಿಸುವ, ಇಂದಿಗೂ ಅಪೂರ್ಣವಾಗಿರುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕೇಂದ್ರದ 5,300 ಕೋಟಿ ರು. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಮೇಲ್ದಂಡೆಯಡಿ ಜಗಳೂರು ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ.