ಮಾ.9ಕ್ಕೆ ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ.ರಾಜೇಶ್ವರಿ ಹೆಗಡೆನ್ಯಾಯಾಲಯದಲ್ಲಿ ಚಾಲ್ತಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ, ಶೀಘ್ರ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಇದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ, ಚೆಕ್ ಅಮಾನ್ಯ ಕೇಸ್, ಭೂ ಸ್ವಾಧೀನ ಪರಿಹಾರ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಎಂಎಂಡಿಆರ್ ಕಾಯ್ದೆಯಡಿ ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ಪರಿಹರಿಸಿಕೊಳ್ಳಲು ಅವಕಾಶ ಇದೆ.