ದಾವಣಗೆರೆಯಲ್ಲಿ ನೋಡುಗರ ಕಣ್ಮನ ಸೆಳೆದ ವಸ್ತುಪ್ರದರ್ಶನನಗರದ ಹೈಸ್ಕೂಲ್ ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಸಂಜೀವಿನಿ ಸ್ವ ಸಹಾಯ ಗುಂಪುಗಳ ಉತ್ಪಾದಿತ ಉತ್ಪನ್ನಗಳ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ’ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.