ಭದ್ರಾ ನಾಲೆ, ಸೇತುವೆ ದುರಸ್ತಿಗೆ ₹20 ಕೋಟಿ ಬಿಡುಗಡೆಜೀವನಾಡಿ ಭದ್ರಾ ನಾಲೆಗಳು ಮಾಯಕೊಂಡ ಕ್ಷೇತ್ರ ಹಾದುಹೋಗಿವೆ. ನಾಲೆಯುದ್ದಕ್ಕೂ ಶಿಥಿಲಾವಸ್ಥೆಯ ಸೇತುವೆ ನಿರ್ಮಾಣ, ನಾಲೆ ಒಳಗಿನ ಕಾಂಕ್ರೀಟ್ ಗೋಡೆಗಳ ನಿರ್ಮಾಣ, ಅಭಿವೃದ್ಧಿ ಸೇರಿದಂತೆ ಇತರೆ ಕಾರ್ಯಕ್ಕೆ ₹20 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಹಂತ ಹಂತವಾಗಿ ನಾಲೆ ದುರಸ್ತಿ, ಸೇತುವೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳುವುದು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.