ಅಭಿವೃದ್ಧಿಗೆ ಹಣ ಮೀಸಲಿಡಿ, ಹಿಂದಿನ ಕಾಮಗಾರಿ ಮುಗಿಸಿದಾವಣಗೆರೆ ಮಹಾನಗರದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು, ಪಾಲಿಕೆ ಸದಸ್ಯರಿಂದ ಸಾಕಷ್ಟು ಸಲಹೆ, ಸೂಚನೆಗಳು ವ್ಯಕ್ತವಾದವು. ಪಾಲಿಕೆ ಸಭಾಂಗಣದಲ್ಲಿ ಮೇಯರ್ ಬಿ.ಎಚ್.ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ನಡೆದ ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ, ಜಿಲ್ಲಾ ಕೇಂದ್ರದ ಗುಂಡಿ ಬಿದ್ದ ರಸ್ತೆಗಳ ದುರಸ್ತಿ, ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು, ಶಿಥಿಲ ದೇವಸ್ಥಾನಗಳ ಜೀರ್ಣೋದ್ಧಾರ, ಕಳೆದ ಬಜೆಟ್ನಲ್ಲಿ ಮಂಡಿಸಿದ ಯೋಜನೆ, ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.