• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೌರಿಪುರ ಹೊಸೂರಿನಲ್ಲಿ ಮತದಾನ ಬಹಿಷ್ಕಾರ
ಜಗಳೂರು ತಾಲೂಕಿನ ಗೌರಿಪುರ ಹೊಸೂರಿನಲ್ಲಿ 103 ಮನೆಗಳಿದ್ದು, 400ಕ್ಕೂ ಹೆಚ್ಚು ಮತಗಳಿವೆ. ಕೂಲಿಕಾರರೇ ಹೆಚ್ಚಿರುವ ಇಲ್ಲಿ 20 ವರ್ಷಗಳಿಂದ ವಾಸ ಮಾಡಿದರೂ ಮನೆಗಳ ಹಕ್ಕುಪತ್ರಗಳನ್ನು ನೀಡಿಲ್ಲ. ಈ ಹಿನ್ನಲೆ ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಗ್ರಾಮದಲ್ಲಿ ಮತದಾನ ಬಹಿಷ್ಕಾರದ ಪೋಸ್ಟರ್ ಕಟ್ಟಿ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ದ್ವಿತೀಯ ಪಿಯು: ದಾವಣಗೆರೆ ಜಿಲ್ಲೆಗೆ ಶೇ.80.96 ಫಲಿತಾಂಶ
ರಾಜ್ಯದಲ್ಲಿ ಮಾರ್ಚ್‌ 2024ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಗೆ ಶೇ.80.96 ಫಲಿತಾಂಶ ಲಭ್ಯವಾಗಿದ್ದು, ಕಳೆದ ವರ್ಷಕ್ಕಿಂತ ಶೇ.5.24 ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ ಒಟ್ಟು 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಈ ಪೈಕಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಜಿಲ್ಲೆಗೆ ಶೇ.80.96 ಫಲಿತಾಂಶ ಬಂದಿದೆ.
ಅವೈಜ್ಞಾನಿಕ ಕಾಂಪೌಂಡ್‌ ಕಾಮಗಾರಿಯಲ್ಲಿ ಅವ್ಯವಹಾರ
ಪಾಲಿಕೆ 18ನೇ ವಾರ್ಡ್‌ನ ದೇವರಾಜ ಅರಸ್ ಬಡಾವಣೆ ಮುಖ್ಯರಸ್ತೆಯ ನಾಲ್ಕೈದು ದಶಕಗಳ ಅಂಚೆ ಇಲಾಖೆ ಸಿಬ್ಬಂದಿಗಾಗಿ ನಿರ್ಮಿಸಿದ್ದ ವಸತಿ ಗೃಹಗಳ ಸುತ್ತ ಹಳೆ ಕಾಂಪೌಂಡ್ ಶಿಥಿಲವಾಗಿದ್ದು, ಅದೇ ಕಾಂಪೌಂಡ್ ಮೇಲೆ ಕಬ್ಬಿಣದ ಗ್ರಿಲ್ ಅಳವಡಿಸಿ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಇಂಥ ಕಳಪೆ ಕಾಮಗಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಭೀಮ್ ಸೇನೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಹಾಗೂ ಪಾಲಿಕೆ ಆಯುಕ್ತ ರೇಣುಕಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಕಾಂಗ್ರೆಸ್‌ಗೆ ಅಹಿಂದ ಮುಖಂಡ ಡಾ. ವೈ.ರಾಮಪ್ಪ ಗುಡ್‌ ಬೈ?
ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ಬಂಡಾಯದ ಕಹಳೆ ಮೊಳಗಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಕಂಟಕ ಶುರುವಾಗಿದೆ. ಅಹಿಂದ ವರ್ಗಗಳ ಮುಖಂಡ, ಭೋವಿ ಸಮಾಜದ ಹಿರಿಯ ಮುಖಂಡ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ ಇದೀಗ ಮಾತೃಪಕ್ಷ ತೊರೆಯಲಿದ್ದಾರೆ.
ಇಫ್ತಿಯಾರ್ ಕೂಟದಲ್ಲಿ ಡಾ.ಎಸ್ಸೆಸ್‌, ಎಸ್ಸೆಸ್ಸೆಂ ಭಾಗಿ
ಹಳೇ ದಾವಣಗೆರೆಯ ಬಾಷಾ ನಗರದಲ್ಲಿನ ಕಾಂಗ್ರೆಸ್ ಹಿರಿಯ ಮುಖಂಡ ಜನಾಬ್ ಸೈಯದ್ ಸೈಫುಲ್ಲಾ ಸಾಬ್ ನಿವಾಸದಲ್ಲಿ ಸೌಹಾರ್ದತೆಯ ಇಫ್ತಿಯಾರ್ ಕೂಟ ನಡೆಯಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆತಿಥ್ಯವನ್ನು ಸ್ವೀಕರಿಸಿದರು.
ಅಡಕೆ ಗಿಡಗಳ ಕಡಿದುಹಾಕಿದ ಸೊಸೆ
ಆಸ್ತಿಯಲ್ಲಿ ಪಾಲು ಕೊಡದ ಕಾರಣ ಸೊಸೆಯೊಬ್ಬಳು 40 ಅಡಕೆ ಗಿಡಗಳನ್ನು ಕಡಿದುಹಾಕಿ, ತನ್ನ ಅತ್ತೆ- ಮಾವನ ವಿರುದ್ಧ ಸೇಡು ತೀರಿಸಿಕೊಂಡ ಘಟನೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ರೂಪ ಎಂಬಾಕೆಯೇ ಮರಗಳ ಕಡಿದ ಗೃಹಿಣಿ. ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಯ ಹಿರಿಯ ಪುತ್ರ ಕುಮಾರಸ್ವಾಮಿ ಅವರ ಪತ್ನಿ.
ಸ್ಪರ್ಧೆ ನಿಶ್ಚಿತ, ದಾವಣಗೆರೆ ಜನತೆ ಗೆಲ್ಲಿಸ್ತಾರೆ: ವಿನಯಕುಮಾರ
ಹೋರಾಟದಿಂದಲೇ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನನಗೆ ರೋಲ್ ಮಾಡೆಲ್ ಆಗಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರನಾಗಿ ಏ.12ರಂದು ಸಾಂಕೇತಿಕ ಹಾಗೂ ಏ.18ರಂದು ಬೆಂಬಲಿಗರೊಂದಿಗೆ ಅದ್ಧೂರಿ ಮೆರವಣಿಗೆಯಲ್ಲಿ 2ನೇ ನಾಮಪತ್ರ ಸಲ್ಲಿಸಲಿದ್ದೇನೆ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಟಿಕೆಟ್ ವಂಚಿತ, ಇನ್‌ಸೈಟ್ಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಸ್ಪಷ್ಟಪಡಿಸಿದರು.
ಚನ್ನಗಿರಿ ಕಾಲೇಜುಗಳ ದ್ವಿತೀಯ ಪಿಯು ಫಲಿತಾಂಶ
ಚನ್ನಗಿರಿ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಿ, ಸಂಭ್ರಮಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕರು, ಪೋಷಕರು ಅಭಿನಂದಿಸಿದರು.
ಸ್ವಾಮೀಜಿಗಳ ಬಗ್ಗೆ ಜೋಷಿ ನಿರಂತರ ಅಪಪ್ರಚಾರ: ದಿಂಗಾಲೇಶ್ವರ ಶ್ರೀ ಆರೋಪ
ಸ್ವಾಮೀಜಿಗಳು, ಲಿಂಗಾಯತರ ಬಗ್ಗೆ ಹಿಂದಿನಿಂದಲೂ ಪ್ರಹ್ಲಾದ ಜೋಷಿ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ. ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವುದರಲ್ಲಿ ಜೋಷಿ ಪ್ರಮುಖ ಪಾತ್ರ ವಹಿಸಿದವರು ಎಂದು ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹರಿಹರದಲ್ಲಿ ಆರೋಪಿಸಿದ್ದಾರೆ.
ರೇಣುಕಾಚಾರ್ಯ ಸಹೋದರನಿಗೆ ಜಾತಿ ಪತ್ರ ಬಳಕೆಗೆ ನಿರ್ಬಂಧ ಆದೇಶ ವಿಸ್ತರಣೆ
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ದಾರುಕೇಶ್ವರಯ್ಯ ಅವರು ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬಳಕೆ ಮಾಡಲು ವಿಧಿಸಲಾಗಿರುವ ನಿರ್ಬಂಧ ಆದೇಶವನ್ನು ಏ.16ರವರೆಗೆ ವಿಸ್ತರಿಸಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 594
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved