ಬಿಜೆಪಿ ಅಭ್ಯರ್ಥಿ ಗೆಲುವೇ ಗುರಿಯಾಗಲಿ: ಶಿವಶಂಕರಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಹೇಳಿದ್ದಾರೆ.