ಮಾಜಿ ನೌಕರನಿಂದಲೇ ಸ್ಮಾಲ್ ಫೈನಾನ್ಸ್ ಸೇಫ್ ಲಾಕರ್‌ಗೆ ಕನ್ನ!ಕಳ್ಳತನ ನಡೆದ 12 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ 10,88,440 ರು.ಗಳನ್ನು ಜಪ್ತಿ ಮಾಡುವಲ್ಲಿ ಕೆಟಿಜೆ ನಗರ ಪೊಲೀಸರು ಯಶಸ್ವಿಯಾಗಿದ್ದು, ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.