ಸ್ಮಶಾನ, ಕೆರೆ, ಗೋಮಾಳ ಮಣ್ಣು ಲೂಟಿಯ ವಿರುದ್ಧ ಕ್ರಮ ಜರುಗಿಸಿಸ್ಮಶಾನ ವಿರೂಪಗೊಳಿಸಿ, ಅಕ್ರಮವಾಗಿ ಮಣ್ಣು ಸಾಗಾಟ ಮಾಡಿ, ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರಗಳನ್ನು ನಾಶಪಡಿಸಿದ, ಕೆರೆ ಮತ್ತು ಗೋಮಾಳ ಒತ್ತುವರಿ ಮಾಡಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಡಿಎಸ್ಎಸ್ ಘಟಕದ ಸಂಚಾಲಕ ಕುಂದುವಾಡ ಮಂಜುನಾಥ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.