ಮಳೆಗೆ ಬೆಳೆ ಹಾನಿ: ಮಾಯಕೊಂಡ ಶಾಸಕ ಪರಿಶೀಲನೆಭಾನುವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಡಕೆ, ಬಾಳೆ, ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕುರುಳಿವೆ. ಇದರಿಂದ ರೈತರಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.