ಕಣುಮ ಸಂತೋಷ್ ಹಂತಕ ಚವಳಿ ಸಂತುಗೆ ಗುಂಡೇಟು!ರೌಡಿ ಶೀಟರ್, ಕಾಂಗ್ರೆಸ್ ಮುಖಂಡ ಕಣುಮ ಅಲಿಯಾಸ್ ಕಣುಮ ಸಂತೋಷನ ಕೊಲೆ ಆರೋಪಿ ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಆವರಗೆರೆ ಸಮೀಪ ಬುಧವಾರ ಸಂಜೆ ನಡೆದಿದೆ.