ಹೊನ್ನಾಳಿ: ಟಿಎಪಿಸಿಎಂಎಸ್‌ನಿಂದ 150 ಟನ್ ಯೂರಿಯಾ ವಿತರಣೆಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನಾದ್ಯಂತ ಮುಂಗಾರು ಹಂಗಾಮಿನಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಆದ್ದರಿಂದ ಬಿತ್ತನೆ ಕಾರ್ಯ ಶೇ.95ರಷ್ಟು ಮುಗಿದಿದೆ. ಈ ಸಂದರ್ಭ ಬೆಳೆಗೆ ಯೂರಿಯಾ ಗೊಬ್ಬರ ಅಗತ್ಯವಾಗಿ ಹಾಕಬೇಕಾಗಿದೆ. ಪರಿಣಾಮ ಯೂರಿಯಾ ರಸಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಉಂಟಾಗಿದೆ. ಆದ್ದರಿಂದ ಹೊನ್ನಾಳಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಯೂರಿಯಾವನ್ನು ಶುಕ್ರವಾರ ಪೊಲೀಸ್ ಬಂದೋಬಸ್ತ್‌ನಲ್ಲಿ ರೈತರಿಗೆ ವಿತರಿಸಲಾಯಿತು.