ರೈತರು ಸ್ವಾವಲಂಬನೆಗೆ ಶ್ರಮಿಸಬೇಕು: ಶಾಸಕ ಬಸವರಾಜರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಅವಲಂಬಿಸಬೇಕಾಗಿದೆ. ರಾಜ್ಯ ಸರ್ಕಾರ ರೈತರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಅವುಗಳನ್ನು ಬಳಸಿ, ಆರ್ಥಿಕ ಪ್ರಗತಿ ಹೊಂದಬೇಕು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.