ಆರ್‌ಟಿಐ ದ್ವಿತೀಯ ಮೇಲ್ಮನವಿ: ಜಿಲ್ಲೆಯಲ್ಲಿ 559 ಪ್ರಕರಣಮಾಹಿತಿ ಹಕ್ಕು ಕಾಯಿದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ, ಹೊಣೆಗಾರಿಕೆ, ಭ್ರಷ್ಟಾಚಾರ ತಡೆ ಸೇರಿದಂತೆ ಆಡಳಿತದಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನು ಹೆಚ್ಚಿಸಲು ಬಹಳ ಉಪಯೋಗವಾಗಿದೆ. ಆರ್.ಟಿ.ಐ. ಕಾಯಿದೆಯಡಿ ಸಲ್ಲಿಕೆಯಾಗುವ 2ನೇ ಮೇಲ್ಮನವಿ ಪ್ರಕರಣಗಳನ್ನು ಗಣನೀಯವಾಗಿ ತಗ್ಗಿಸಲು ಮಾಹಿತಿ ಹಕ್ಕು ಆಯೋಗ ಮುಂದಾಗಿದೆ. ನವೆಂಬರ್ ವೇಳೆಗೆ ಜಿಲ್ಲಾ ಹಂತದಲ್ಲಿ ಕಲಾಪ ನಡೆಸುವ ಮೂಲಕ ಅದಾಲತ್ ಮಾದರಿಯಲ್ಲಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಕ್ರಮವಹಿಸಲಾಗುತ್ತದೆ ಎಂದು ಮಾಹಿತಿ ಹಕ್ಕು ಆಯೋಗ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದ್ದಾರೆ.