14ರಂದು ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ 286ನೇ ಜಯಂತಿಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಸೂರಗೊಂಡನಕೊಪ್ಪದ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸಹಯೋಗದಲ್ಲಿ ಸೇವಾಲಾಲ್ರವರ 286ನೇ ಜಯಂತ್ಯುತ್ಸವ, ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಫೆ.14ರಂದು ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಭಾಯಗಡ್ನಲ್ಲಿ ನಡೆಯಲಿದೆ.