ಇಂದು ಕಾರ್ಮಿಕ ವಿರೋಧಿ ಸಂಹಿತೆ ರದ್ದುಪಡಿಸಲು ಮುಷ್ಕರದಿನಕ್ಕೆ 8 ಗಂಟೆ ಕೆಲಸದ ಅವಧಿ, ಕೆಲಸ ಕಾಯಂ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು, ಇನ್ನಿತರೆ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕಾರ್ಪೋರೇಟ್ ಬಂಡವಾಳಗಾರರ ಪರ ರೂಪಿಸಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣ ರದ್ದುಪಡಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಜು.9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ನಗರದಲ್ಲಿ ಕಾರ್ಮಿಕ-ರೈತ ಸಂಘಟನೆಗಳ ಮುಖಂಡರು ನಗರದ ಶ್ರೀ ಜಯದೇವ ವೃತ್ತದಲ್ಲಿ ಈ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದಾರೆ.