ಸಾರಾಂಶ
ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.

ಮಕ್ಕಳಸ್ನೇಹಿ ವಾತಾವರಣ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ತಡೆಗಟ್ಟಲು ಮಕ್ಕಳ ರಕ್ಷಣೆ ಸಹಾಯವಾಣಿ-1098 ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸುವುದು, ಮಕ್ಕಳ ರಕ್ಷಣಾ ನೀತಿ ಅನುಷ್ಠಾನಗೊಳಿಸುವುದು, ಮಕ್ಕಳ ರಕ್ಷಣಾ ಸಮಿತಿ ಸಭೆ ನಡೆಸಿ ಸಭಾ ನಡವಳಿ ನಿರ್ವಹಿಸುವುದು, ಸಿಬ್ಬಂದಿಯಿಂದ ಮಕ್ಕಳ ರಕ್ಷಣಾ ನೀತಿಗೆ ಭದ್ರತಾ ಪತ್ರ ಪಡೆಯುವ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.ಮಕ್ಕಳಿಗೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. 15 ದಿನಗಳೊಳಗಾಗಿ ಆಯೋಗಕ್ಕೆ ಈ ಬಗ್ಗೆ ವರದಿ ನೀಡಲು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜನಾಯ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್., ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.