ಸಾರಾಂಶ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಶುಕ್ರವಾರ ಆರಂಭವಾಗಿದ್ದು, ಮೊದಲ ದಿನವೇ ಐವರು ಅಭ್ಯರ್ಥಿಗಳು ಒಟ್ಟು 6 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
- ಕಾಂಗ್ರೆಸ್ಸಿನ ಡಾ.ಪ್ರಭಾ, ಜಿ.ಬಿ.ವಿನಯ್ ಸೇರಿ ಐವರಿಂದ ಉಮೇದುವಾರಿಕೆ
- - - ಕನ್ನಡಪ್ರಭ ವಾರ್ತೆ, ದಾವಣಗೆರೆದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಶುಕ್ರವಾರ ಆರಂಭವಾಗಿದ್ದು, ಮೊದಲ ದಿನವೇ ಐವರು ಅಭ್ಯರ್ಥಿಗಳು ಒಟ್ಟು 6 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ 2 ನಾಮಪತ್ರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದಿಂದ ಕೆ.ಎ. ತಿಪ್ಪೇಸ್ವಾಮಿ, ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ, ಕೆಆರ್‌ಎಸ್ ಪಕ್ಷದಿಂದ ಜಿ.ಪಿ. ರಾಘವೇಂದ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ. ವಿನಯಕುಮಾರ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆ ಶುಕ್ರವಾರದಿಂದ ಆರಂಭವಾದ ಹಿನ್ನೆಲೆ ಹಳೇ ಪಿ.ಬಿ. ರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿ ಕಾಂಪೌಂಡ್‌ವರೆಗಿನ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
- - - -12ಕೆಡಿವಿಜಿ8: ದಾವಣಗೆರೆಯಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಜಿ.ಪಿ.ರಾಘವೇಂದ್ರ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.-12ಕೆಡಿವಿಜಿ9: ದಾವಣಗೆರೆಯಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಈಶ್ವರ್ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.