ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಯು ರಾಜ್ಯ, ರಾಷ್ಟ್ರಕ್ಕೆ ಮಾದರಿಯಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಶೀಘ್ರವೇ ₹100 ಕೋಟಿ ಅನುದಾನ ತರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.

- ಜಿಲ್ಲಾ ಕೇಂದ್ರ ಅಭಿವೃದ್ಧಿಗೆ 100 ಕೋಟಿ ಅನುದಾನ: ಸಚಿವ ಭರವಸೆ - - - .

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಯು ರಾಜ್ಯ, ರಾಷ್ಟ್ರಕ್ಕೆ ಮಾದರಿಯಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಶೀಘ್ರವೇ ₹100 ಕೋಟಿ ಅನುದಾನ ತರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು.

ನಗರದ 40ನೇ ವಾರ್ಡ್ ನ ಆಂಜನೇಯ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನೂತನ ಕೊಠಡಿ, ಶೌಚಾಲಯ, ಲೈಬ್ರರಿ, ಆವರಣ ಮತ್ತು ಸಭಾಂಗಣ ನಿರ್ಮಾಣ ಹಾಗೂ 1ನೇ ವಾರ್ಡ್‍ನ ಮೆಟ್ರಿಕ್ ನಂತರದ ಹಾಸ್ಟೆಲ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ದಾವಣಗೆರೆ ಉತ್ತರ-ದಕ್ಷಿಣ ಕ್ಷೇತ್ರದ ಬಹುತೇಕ ಎಲ್ಲ ರಸ್ತೆ ಸಿಮೇಂಟಿಕರಣಗೊಂಡಿವೆ. ಎಲ್ಲ ಕಡೆ ಮೂಲಸೌಕರ್ಯ ಕಲ್ಪಿಸಲಾಗಿದೆ ಎಂದರು.

ಆಂಜನೇಯ ಬಡಾವಣೆ ಸಪ್ರದ ಮಹಿಳಾ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಇಲಾಖೆಯಿಂದ ₹4 ಕೋಟಿ ವೆಚ್ಚದಲ್ಲಿ ಕೊಠಡಿಗಳು, ಶೌಚಾಲಯ, ಲೈಬ್ರರಿ, ಆವರಣ ಮತ್ತು ಸಭಾಂಗಣ ನಿರ್ಮಿಸಲಾಗುತ್ತಿದೆ. ವಿದ್ಯಾರ್ಥಿಗಳ ಕೆಲ ಬೇಡಿಕೆಗಳಿದ್ದು, ಅವುಗಳನ್ನು ಶೀಘ್ರ ಈಡೇರಿಸುವುದಾಗಿ ಭರವಸೆ ನೀಡಿದರು.

1ನೇ ವಾರ್ಡ್‍ನ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ಅಂದಾಜು ₹4.15 ಕೋಟಿ ಮೊತ್ತದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಸಚಿವರ ಜೊತೆ ಮಾತನಾಡಿ, ಆರಂಭಿಸಲಾಗಿದೆ. ಬರುವ ವರ್ಷವೇ ಈ ಕಟ್ಟಡ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ತರಾತುರಿ ಕಾಮಗಾರಿ ಹೆಸರಿನಲ್ಲಿ ಕಳಪೆ ಕಾಮಗಾರಿ ಆಗುವುದು ಬೇಡ. ಕಳಪೆ ಕಾಮಗಾರಿಗೆ ನಮ್ಮಲ್ಲಿ ಅವಕಾಶವನ್ನೂ ನೀಡುವುದಿಲ್ಲ ಎಂದು ಗುತ್ತಿಗೆದಾರರು, ಅಧಿಕಾರಿಗಳಿಗೆ ಸಚಿವ ಮಲ್ಲಿಕಾರ್ಜುನ ಸೂಚ್ಯವಾಗಿ ಹೇಳಿದರು.

ಅಪೆಕ್ಸ್ ಬ್ಯಾಂಕ್‌ ನಿರ್ದೇಶಕ ಮುದೇಗೌಡರ ಗಿರೀಶ್, ಮಾಗಾನಹಳ್ಳಿ ಬಿ.ಕೆ. ಪರಶುರಾಮ್, ಎಲ್.ಎಂ.ಎಚ್. ಸಾಗರ್‌, ಬೂದಾಳ್‌ ಬಾಬು, ಎಲ್.ಡಿ.ಗೋಣೆಪ್ಪ, ಉಮಾಶಂಕರ್, ಟಿ.ರಮೇಶ ಗಾಂಧಿ ನಗರ, ಲೊಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳು, ಸಪ್ರದಮ ಕಾಲೇಜಿನ ಪ್ರಾಂಶುಪಾಲ, ಕಾಲೇಜಿನ ಸಲಹಾ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು, ಮತ್ತಿತರರಿದ್ದರು.

- - -

-6ಕೆಡಿವಿಜಿ17, 18, 19:

ದಾವಣಗೆರೆಯಲ್ಲಿ ಮಂಗಳವಾರ ಸಂಜೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.