ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮೇ 7ಕ್ಕೆ ಮತ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌

| Published : Mar 17 2024, 01:47 AM IST

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮೇ 7ಕ್ಕೆ ಮತ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ.20 ನಾಮಪತ್ರ ಪರಿಶೀಲಿಸುವ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಏ.22ರ ಕಡೇ ದಿನವಾಗಿದೆ. ಮತದಾನ ಮೇ 7ರಂದು ನಡೆಯಲಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ದೇಶದ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಏ.12ರಂದು ಅಧಿಸೂಚನೆ ಹೊರಡಿಸಲಿದ್ದು, ಸಾರ್ವತ್ರಿಕ ಚುನಾವಣೆ ಮೇ 7ರಂದು ನಡೆಯಲಿದ್ದು, ಇಂದಿನಿಂದಲೇ ನೀತಿ ಸಂಹಿತೆಯೂ ಜಾರಿಗೊಳ್ಳಲಿದೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ತಿಳಿಸಿದರು.

ನಗರದ ಡಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ.20 ನಾಮಪತ್ರ ಪರಿಶೀಲಿಸುವ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಏ.22ರ ಕಡೇ ದಿನವಾಗಿದೆ. ಮತದಾನ ಮೇ 7ರಂದು ನಡೆಯಲಿದೆ ಎಂದು ಹೇಳಿದರು.

ಜೂ.4ರಂದು ತಾಲೂಕಿನ ತೋಳಹುಣಸೆ ಶಿವಗಂಗೋತ್ರಿಯ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ ತಿಳಿಸಿದರು. ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಂದ 1946 ಮತಗಟ್ಟೆಗಳಿದ್ದು, ಈ ಪೈಕಿ 387 ಸೂಕ್ಷ್ಮ ಹಾಗೂ 11 ಅತೀ ಸೂಕ್ಷ್ಮ ಮತಗಟ್ಟೆಗಳಾಗಿವೆ ಎಂದು ತಿಳಿಸಿದರು.

ಜಿಪಂ ಸಿಇಒ ಡಾ.ಸುರೇಶ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಪಾಲಿಕೆ ಆಯುಕ್ತೆ ರೇಣುಕಾ ಇತರರಿದ್ದರು. ಲೋಕಸಭಾ ಕ್ಷೇತ್ರದಲ್ಲಿ 16,79,746 ಮತದಾರರು

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 16,79,746 ಮತದಾರರಿದ್ದಾರೆ. ಈ ಪೈಕಿ 8,38,705 ಪುರುಷ, 84,0340 ಮಹಿಳಾ, 136 ಇತರೆ ಮತದಾರರು, 565 ಜನ ಸೇವಾ ಮತದಾರರಿದ್ದಾರೆ. 22.1.2024ರಂದು ಹೊರಡಿಸಿರುವ ಮತದಾರ ಪಟ್ಟಿಯಂತೆ ಕ್ಷೇತ್ರದಲ್ಲಿ 36,849 ಯುವ ಮತದಾರರಿದ್ದಾರೆ. ಇದರಲ್ಲಿ 19507 ಯುವಕರು, 17339 ಯುವತಿಯರು, 3 ಇತರೆ ನವ ಮತದಾರರಾಗಿದ್ದಾರೆ.

ವಿಧಾನಸಭಾ ಕ್ಷೇತ್ರಕ್ಕೊಬ್ಬ ಸಹಾಯಕ ಚುನಾವಣಾಧಿಕಾರಿಮತದಾರರು ಎಪಿಕ್ ಕಾರ್ಡ್ ಹೊಂದಿದ ಮಾತ್ರಕ್ಕೆ ಮತ ಚಲಾಯಿಸಲು ಅರ್ಹರಲ್ಲ. ಮತ ಚಲಾಯಿಸಲು ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿರುವುದು ಕಡ್ಡಾಯವಾಗಿದೆ. ಪ್ರಸ್ತುತ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕದ ಹಿಂದಿನ 10 ದಿನಗಳವರೆಗೆ ಸೇರ್ಪಡೆ ಹಾಗೂ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಶಾಂತಿಯುತವಾಗಿ ಚುನಾವಣೆ ನಡೆಸಲು ಆಯೋಗದ ನಿರ್ದೇಶನದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಎಲ್ಲಾ 8 ವಿಧಾನಸಭಾ ಕ್ಷೇತ್ರ(ಹರಪನಹಳ್ಳಿ ಸೇರಿದಂತೆ) ಗಳಿಗೆ ಒಬ್ಬರಂತೆ ಸಹಾಯಕ ಚುನಾವಣಾಧಿಕಾರಿಗಳ ನೇಮಿಸಲಾಗಿದೆ. ವಿವಿಧ ಕ್ಷೇತ್ರಗಳಿಗೆ ನೇಮಕವಾದ ಅಧಿಕಾರಿಗಳು: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಚುನಾವಣಾಧಿಕಾರಿಯಾಗಿದ್ದಾರೆ. ಅಪರ ಜಿಲ್ಲಾಧಿಕಾರಿ ಸೈಯೀದ ಅಫ್ರೀನ್ ಭಾನು ಎಸ್.ಬಳ್ಳಾರಿ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ. ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಸಿದ್ರಾಮ ಮಾರಿಹಾಳ್ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ. ಹರಪನಹಳ್ಳಿ ಕ್ಷೇತ್ರಕ್ಕೆ ಅಲ್ಲಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಹರಿಹರಕ್ಕೆ ಭೂ ದಾಖಲೆಗಳ ಇಲಾಖೆ ತಾಂತ್ರಿಕ ಸಹಾಯಕಿ ಬಿ.‍ಭಾವನಾ, ದಾವಣಗೆರೆ ಉತ್ತರಕ್ಕೆ ಜಿಲ್ಲಾ ನೋಂದಣಾಧಿಕಾರಿ ಇಸ್ಮಾಯಿಲ್‌ ಎಫ್.ಡಿ., ದಾವಣಗೆರೆ ದಕ್ಷಿಣಕ್ಕೆ ಮಹಾ ನಗರ ಪಾಲಿಕೆ ಆಯುಕ್ತೆ ರೇಣುಕಾ, ಮಾಯಕೊಂಡಕ್ಕೆ ಉಪ ವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ಚನ್ನಗಿರಿಗೆ ಗೂಡಾದ ವಿಶೇಷ ಭೂ ಸ್ವಾಧೀನಾಧಿಕಾರಿ ಎಸ್.ರವಿ, ಹೊನ್ನಾಳಿಗೆ ಉಪ ವಿಭಾಗಾಧಿಕಾರಿ ವಿ.ಅಭಿಷೇಕ್ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.