ದಾವಣಗೆರೆ: ಅಧಿಕಾರಿಗಳಿಂದ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ

| Published : Jul 25 2025, 12:31 AM IST

ದಾವಣಗೆರೆ: ಅಧಿಕಾರಿಗಳಿಂದ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್ ಹಾಗೂ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾವಣಗೆರೆ ನಗರ ಹಾಗೂ ಆನಗೋಡು ಹೋಬಳಿಯ ವಿವಿಧ ರಸಗೊಬ್ಬರದ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆಯಿಂದಾಗಿ ರೈತರು ಆಕ್ರೋಶಗೊಂಡಿರುವ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್ ಹಾಗೂ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾವಣಗೆರೆ ನಗರ ಹಾಗೂ ಆನಗೋಡು ಹೋಬಳಿಯ ವಿವಿಧ ರಸಗೊಬ್ಬರದ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ ಯೂರಿಯಾ ರಸಗೊಬ್ಬರ ದಾಸ್ತಾನು ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿಗಳ ಸೂಚನೆಯಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಹಲವು ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ಇದುವರೆಗೆ ಪೂರೈಕೆಯಾಗಿರುವ ರಸಗೊಬ್ಬರ, ಮಾರಾಟವಾದ ಪ್ರಮಾಣ ಮತ್ತು ದಾಸ್ತಾನು ಕುರಿತು ಮಾರಾಟಗಾರರನ್ನು ಪ್ರಶ್ನಿಸಿ ಮಾಹಿತಿ ಪಡೆದರು.

ತಾಲೂಕಿಗೆ ಪೂರೈಕೆಯಾಗಿರುವ ಯೂರಿಯಾ ರಸಗೊಬ್ಬರವನ್ನು ದಾವಣಗೆರೆ ಜಿಲ್ಲೆಯಿಂದ ಹೊರಗಡೆಗೆ ಕಳುಹಿಸುತ್ತಿರುವುದು ಕಂಡು ಬಂದಿದ್ದು, ಅದನ್ನು ನಿಲ್ಲಿಸಿ, ದಾವಣಗೆರೆ ಜಿಲ್ಲೆಯ ರೈತರುಗಳಿಗೆ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಿರುವ ಹಾಗೆ ಕ್ರಮ ವಹಿಸಬೇಕು. ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಬಳಕೆಯ ಅನುಕೂಲತೆಗಳನ್ನು ರೈತರುಗಳಿಗೆ ಮನವರಿಕೆ ಮಾಡಿ, ರೈತರುಗಳು ನ್ಯಾನೋ ಯೂರಿಯಾ ಬಳಕೆ ಮಾಡಲು ಪ್ರೋತ್ಸಾಹಿಸಬೇಕೆಂದು ತಿಳಿಸಿದರು.

ಭೌತಿಕ ರಸಗೊಬ್ಬರ ದಾಸ್ತಾನಿಗೂ ಪಿಓಎಸ್ ರಸಗೊಬ್ಬರ ದಾಸ್ತಾನಿಗೂ ವ್ಯತ್ಯಾಸವಾಗಬಾರದೆಂದು ಕೂಡ ಎಚ್ಚರಿಸಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಡಿ.ಎಂ.ಶ್ರೀಧರಮೂರ್ತಿ, ಕೃಷಿ ಅಧಿಕಾರಿಗಳಾದ ಆರ್.ಸಂಜೀವ್‌ಕುಮಾರ್, ಹುಣ್ಸಿಹಳ್ಳಿ ಚಂದ್ರಪ್ಪ, ಆರ್.ಶ್ರೀನಿವಾಸ ಇದ್ದರು.