ಇಲ್ಲಿನ ಮುದರಂಗಡಿಯಲ್ಲಿ ಆ.7ರಂದು ಹಾಡಹಗಲೇ ಉದ್ಯಮಿ, ಕಾಂಗ್ರೆಸ್ ನಾಯಕ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಕೊಲೆ ಪ್ರಕರಣದ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಪು: ಇಲ್ಲಿನ ಮುದರಂಗಡಿಯಲ್ಲಿ ಆ.7ರಂದು ಹಾಡಹಗಲೇ ಉದ್ಯಮಿ, ಕಾಂಗ್ರೆಸ್ ನಾಯಕ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಕೊಲೆ ಪ್ರಕರಣದ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 8ಕ್ಕೇರಿದೆ.ಬಂಧಿತ ಆರೋಪಿ ಬಿಹಾರದ ಶೇಕ್‌ಪುರ ಜಿಲ್ಲೆ ಕೊಟ್ಟಾರಿ ಎಂಬಲ್ಲಿ ನಿವಾಸಿ ಸೂರಜ್ ಕುಮಾರ್ (31) ಎಂದು ಗುರುತಿಸಲಾಗಿದೆ. ಈತ ಕೊಲೆಯ ನಂತರ ತಲೆಮರೆಸಿಕೊಂಡಿದ್ದು, ಆತನನ್ನು ಉತ್ತರಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ಹಲ್ದ್‌ವಾನಿ ಎಂಬಲ್ಲಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಕೊಲೆಯಲ್ಲಿ ನೇರವಾಗಿ ಶಾಮೀಲಾದ ರಾಜು, ಅನ್ಮೋಲ್ ರಸ್ತೋಗಿ ಮತ್ತು ಜಿಯಾಹುಲ್ ವಾಜುಲ್ ಶೇಖ್ ಅವರನ್ನು ಮೊದಲ ದಿನವೇ ಬಂಧಿಸಲಾಗಿತ್ತು. ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿದ ಮತ್ತು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಮತ್ತು ಕಿಶೋರ್ ರಾಮ ಪೂಜಾರಿ ಎಂಬವರನ್ನು ಕೂಡ ಬಂಧಿಸಲಾಗಿದೆ. ಈಗ ಸೂರಜ್ ಕುಮಾರ್‌ನನ್ನು ಆರೋಪಿಗಳಿಗೆ ಹಣಕಾಸು ಪೂರೈಕೆ ಮಾಡಿದ ಆರೋಪದಲ್ಲಿ ಬಂಧಿಸಲಾಗಿದ್ದು, ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.