ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ಶುಕ್ರವಾರ ರಾತ್ರಿ ಅಹೋರಾತ್ರಿ ಧರಣಿ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ರಾಯಚೂರು
ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಕ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ಶುಕ್ರವಾರ ರಾತ್ರಿ ಅಹೋರಾತ್ರಿ ಧರಣಿ ನಡೆಸಲಾಯಿತು.ಸ್ಥಳೀಯ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಮುಂದೆ ಸೇರಿದ ವೇದಿಕೆಯ ಪದಾಧಿಕಾರಿಗಳು,ಸದಸ್ಯರು, ಮಹಿಳೆಯರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆ ಕೂಗಿದರು.
ಸ್ವಾತಂತ್ರ್ಯ ಭಾರತ ದೇಶದಲ್ಲಿ ಶಿಕ್ಷಣಕ್ಕೆ ತನ್ನದೇ ಆದ ಪ್ರಾಮುಖ್ಯತೆಯಿದ್ದರೂ ಆಡಳಿತ ನಡೆಸುತ್ತಿರುವ ಸರ್ಕಾರಗಳು ಬಡ ಮಕ್ಕಳ ಶಿಕ್ಷಣ, ಸರ್ಕಾರಿ ಶಾಲೆಗಳ ಸಂರಕ್ಷಣೆ ವಿಚಾರದಲ್ಲಿ ಕಾಳಜಿ ವಹಿಸದೇ ಸರ್ಕಾರಿ ಶಾಲಾ ಕ್ಷೇತ್ರವನ್ನು ಕೊಲೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಖಾಲಿ ಇರುವ ,62 ಸಾವಿರ ಶಿಕ್ಷಕರನ್ನು ತಕ್ಷಣ ತುಂಬಬೇಕು. ಆರ್‌ಟಿಇ ಸಮರ್ಪಕ ಜಾರಿಯಾಗಬೇಕು. ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ನೀಡಬೇಕು .ತರಗತಿ ವಾರ ವಿಷಯವಾರು ಶಿಕ್ಷಕರನ್ನು ತುಂಬಬೇಕು ಎಂದು ಒತ್ತಾಯಿಸಿದರು.
ಈ ಅಹೋರಾತ್ರಿ ಧರಣಿಯಲ್ಲಿ ವೇದಿಕೆಯ ಮುಖ್ಯಸ್ಥರಾದ ವಿದ್ಯಾ ಪಾಟೀಲ್, ಮರಿಯಮ್ಮ, ಸಾವಿತ್ರಮ್ಮ, ಶಿವಮ್ಮ, ರಾಧಾ,ಅಕ್ಕಮ್ಮ,ಗೋವಿಂದ, ಪ್ರಸಾದ್, ಗುರುರಾಜ್, ಗೋವಿಂದ. ಬಸವರಾಜ್. ಆಂಜನೇಯ. ಹಫೀಜುಲಾ. ಎಂ ಆರ್ ಭೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.-----------------
14ಕೆಪಿಆರ್‌ಸಿಆರ್ 05: ರಾಯಚೂರಿನ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಮುಂದೆ ಸೇರಿದ ವೇದಿಕೆಯಿಂದ ಅಹೋರಾತ್ರಿ ಧರಣಿ ನಡೆಸಲಾಯಿತು.