ಸಾರಾಂಶ
ಕನ್ನಡಪ್ರಭ ವಾರ್ತೆ ಹೊಸಪೇಟೆ
ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಅವರ ಸಮೀಕ್ಷಾ ವರದಿ ಜು. 30ರೊಳಗೆ ಸಲ್ಲಿಕೆಯಾಗಬೇಕು. ಬಿಜೆಪಿ ಹಾಗೂ ಜೆಡಿಎಸ್ ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆ ಪ್ರಕಟಿಸಬೇಕು. ರಾಜ್ಯ ಸರ್ಕಾರ ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಆ. 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿಯ ಸಹ ಸಂಚಾಲಕರಾದ ಕರಿಯಪ್ಪ ಗುಡಿಮನೆ, ಸಣ್ಣಮಾರೆಪ್ಪ ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2024ರ ಆ. 1ರಂದು ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ಆದ್ಯತೆ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪಅನ್ನು ನೀಡಿದೆ. ರಾಜ್ಯ ಸರ್ಕಾರ ವಿಳಂಬ ಮಾಡದೇ, ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸದೇ, ಪ್ರಸಕ್ತ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು. ಜಸ್ಟಿಸ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ನೇಮಕವಾದ ಏಕಸದಸ್ಯ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವೈಜ್ಞಾನಿಕ ಹಾಗೂ ವಸ್ತುನಿಷ್ಠ ವರದಿಯನ್ನು ಜು. 30ರೊಳಗಡೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಬೇಕು. ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರೇ ಹೆಚ್ಚಿದ್ದಾರೆ. ಒಳ ಮೀಸಲಾತಿಯನ್ನು ರಾಜಕೀಯ ವಿಷಯವನ್ನಾಗಿಸಬಾರದು. ಈ ವಿಷಯ ಜೀವಂತವಾಗಿಟ್ಟುಕೊಂಡು ವೋಟ್ ಬ್ಯಾಂಕ್ ಮಾಡಬಾರದು. ಈ ಹೋರಾಟ ಮೂರು ದಶಕಗಳ ಹೋರಾಟವಾಗಿದೆ. ಇದನ್ನು ಅರಿತುಕೊಳ್ಳಬೇಕು ಎಂದರು.ಮುಖಂಡ ಕಾರಿಗನೂರು ಲಕ್ಷ್ಮಣ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗದ ವರದಿಯನ್ನು ಮಳೆಗಾಲದ ಅಧಿವೇಶನದಲ್ಲಿ ಚರ್ಚಿಸಿ, ಕ್ಯಾಬಿನೆಟ್‌ನಲ್ಲಿ ಮಂಡನೆ ಮಾಡಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಆದೇಶದಂತೆ ತಕ್ಷಣವೇ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಕೊಟಗಿನಾಹಳ್ ಮಲ್ಲಿಕಾರ್ಜುನ, ಡಣಾಯಕನಕೆರೆ ನಾಗಪ್ಪ, ಕಿನ್ನೂರಿ ಶೇಖಪ್ಪ, ಚೌಡಪ್ಪ, ಜೋಗಿ ರಮೇಶ್, ಹಾರುವಹಳ್ಳಿ ಲಕ್ಷ್ಮಣ, ಶೇಖರ್ ಚನ್ನದಾಸರ ಮತ್ತಿತರರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))