ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ತುಂಗಭದ್ರಾ ಸಭಾಂಗಣದಲ್ಲಿ ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಶ್ವ ವಿಕಲಚೇತನರ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ದಾವಣಗೆರೆ: ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ತುಂಗಭದ್ರಾ ಸಭಾಂಗಣದಲ್ಲಿ ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಶ್ವ ವಿಕಲಚೇತನರ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಗಣಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ., ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ.ಹರೀಶ್, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರುಣ್, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎನ್. ಜಯದೇವ ನಾಯ್ಕ್, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ ಮಂಜಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿ ರಾವ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಒ ಗಿತ್ತೆ ಮಾದವ್ ವಿಠ್ಠಲ ರಾವ್ ಉಪಸ್ಥಿತರಿರುವರು.
- - -(ಸಾಂದರ್ಭಿಕ ಚಿತ್ರ)