ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಪಂಸಿಇಒ ಗಜಾನನ ಬಾಲೆ ಅವರು ಕೃಷಿ, ತೋಟಗಾರಿಕೆ ಅಧಿಕಾರಿಗಳೊಂದಿಗೆ ಗುರುವಾರ ಬರ ಅಧ್ಯಯನ ಪ್ರವಾಸ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಪಂಸಿಇಒ ಗಜಾನನ ಬಾಲೆ ಅವರು ಕೃಷಿ, ತೋಟಗಾರಿಕೆ ಅಧಿಕಾರಿಗಳೊಂದಿಗೆ ಗುರುವಾರ ಬರ ಅಧ್ಯಯನ ಪ್ರವಾಸ ನಡೆಸಿದರು.ಬಾದಾಮಿ ತಾಲೂಕಿನ ಕೆರೂರ ಹೋಬಳಿ ವ್ಯಾಪ್ತಿಯ ಗಂಗನ ಬೂದಿಹಾಳ ಗ್ರಾಮದ ಹೊಲಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಮಳೆಯ ಕೊರತೆಯಿಂದ ಕುಂಠಿತಗೊಂಡಿರುವ ತೊಗರಿ ಮತ್ತು ಸಜ್ಜೆ ಬೆಳೆಗಳನ್ನು ಪರಿಶೀಲಿಸಿದರು. ನಂತರ ಹೂಲಗೇರಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಈರುಳ್ಳಿ ಹಾಗೂ ಮೆಕ್ಕೆಜೋಳ ಬೆಳೆಗಳ ಸ್ಥಿತಿಯನ್ನು ವೀಕ್ಷಿಸಿದರು.
ಮಳೆ ಕೊರತೆಯಿಂದ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಸಂಗಪ್ಪ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕ್ಷೇತ್ರಮಟ್ಟದಲ್ಲಿ ಸಮಗ್ರ ಪರಿಶೀಲನೆ ನಡೆಸಿ ಬೆಳೆ ಹಾನಿಯ ವಾಸ್ತವಿಕ ವರದಿಯನ್ನು ಸಿದ್ಧಪಡಿಸುವಂತೆ ಸೂಚಿಸಿದರು.ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನೈಜ ಸ್ಥಿತಿಯನ್ನು ಕ್ಷೇತ್ರಮಟ್ಟದಲ್ಲಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು. ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಉಪನಿದೇರ್ಶಕ ರವೀಂದ್ರ ಹಕಾಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.