ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ  ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಶುಕ್ರವಾರ ಭೇಟಿ ನೀಡಿ ಜಂಟಿಯಾಗಿ ವೀಕ್ಷಣೆ ಮಾಡಿದರು. ಆಲಮಟ್ಟಿ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಾಗೂ ಬಿಡುಗಡೆ ಮಾಡುತ್ತಿರುವ ನೀರಿನ ಪ್ರಮಾಣದ ಸ್ಥಿತಿಗತಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಶುಕ್ರವಾರ ಭೇಟಿ ನೀಡಿ ಜಂಟಿಯಾಗಿ ವೀಕ್ಷಣೆ ಮಾಡಿದರು. ಆಲಮಟ್ಟಿ ಜಲಾಶಯದಲ್ಲಿರುವ ನೀರಿನ ಸಂಗ್ರಹ ಹಾಗೂ ಬಿಡುಗಡೆ ಮಾಡುತ್ತಿರುವ ನೀರಿನ ಪ್ರಮಾಣದ ಸ್ಥಿತಿಗತಿಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಶುಕ್ರವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪ್ರಸ್ತುತ ಜಲಾಶಯದ ಸಾಮರ್ಥ್ಯ 83.486 ಟಿಎಂಸಿ ಇದ್ದು, ಲೈವ್ ಸಾಮರ್ಥ್ಯ 65.866 ಟಿಎಂಸಿ ಇದೆ. ಅಲ್ಲದೇ, ಒಳ ಹರಿವು 2.04 ಲಕ್ಷ ಕ್ಯುಸೆಕ್ ಇದ್ದು, ಹೊರ ಹರಿವು 2.66 ಲಕ್ಷ ಕ್ಯುಸೆಕ್ ಇದೆ. ಅಲ್ಲದೇ, ಇನ್ನು ಒಳ ಹರಿವಿನ ನೀರಿನ ಪ್ರಮಾಣದಲ್ಲಿ ಹೆಚ್ಚಾಗುತ್ತಲಿದೆ. ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಕೆರೆ ತುಂಬಿಸುವ ಕಾರ್ಯವಾಗಬೇಕಿದೆ ಎಂದು ಕೆಬಿಜೆಎನ್ಎಲ್ ಮುಖ್ಯ ಅಧೀಕ್ಷಕ ಎಚ್.ಎಸ್.ಶ್ರೀನಿವಾಸ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.ಈ ಭೇಟಿ ಸಮಯದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಸೀಲ್ದಾರ್ ಅಮರೇಶ ಪಮ್ಮಾರ, ಕೆಬಿಜೆಎನ್ಎಲ್ ಅಧೀಕ್ಷಕ ಅಭಿಯಂತರ ವೀರನಗೌಡ ಹಿರೇಗೌಡರ ಸೇರಿದಂತೆ ಕೆಬಿಜೆಎನ್ಎಲ್‌ನ ಸಹಾಯಕ ಅಭಿಯಂತರರು ಹಾಗೂ ಸಿಬ್ಬಂದಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))