ಸಾರಾಂಶ
ಸ್ವಚ್ಛತೆ ಕಾಪಾಡಲು ಸೂಚನೆ । ಅಗತ್ಯ ಮೂಲಭೂತ ಸವಲತ್ತು ಕಡ್ಡಾಯವಾಗಿ ನೀಡಬೇಕು
--- ಆನ್‍ಲೈನ್ ತರಗತಿಗಳಿಗೆ ವ್ಯವಸ್ಥೆ
- ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು- ಡೆಂಘೀ ಪ್ರಕರಣಗಳು ಹೆಚ್ಚಳ, ವಿದ್ಯಾರ್ಥಿನಿಯರು ಜಾಗೃತ ರಾಗಿರಿ
- ಹಾಸಿಗೆ ವ್ಯವಸ್ಥೆ, ಔಷಧಿಗಳ ಲಭ್ಯತೆ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ನಗರದ ಇಂಜಿನಿಯರ್ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಿಲಯಗಳಿಗೆ ಶನಿವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ದಿಢೀರ್ ಭೇಟಿ ನೀಡಿ ಹಾಸ್ಟೆಲ್‍ನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಬಗ್ಗೆ ಪರಿಶೀಲನೆ ನಡೆಸಿದರು.ನಗರದ ವಿವಿಧ ಹಾಸ್ಟೆಲ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಮಗ್ರವಾಗಿ ಪರಿಶೀಲನೆ ನಡೆಸಿ ಡೆಂಘೀ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಮೊದಲಿಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಇಲ್ಲಿನ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಇಂಜಿನಿಯರ್ ಹಾಸ್ಟೆಲ್ ವಿದ್ಯಾರ್ಥಿನಿ ಯರಿಗೆ ಆರೋಗ್ಯ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಬೇಕು. ಊಟದ ವ್ಯವಸ್ಥೆ ಶುಚಿತ್ವದಿಂದ ಕೂಡಿರಬೇಕು ಎಂದ ಅವರು, ಬಳಿಕ ವಿದ್ಯಾರ್ಥಿನಿಯೊಂದಿಗೆ ಕೆಲಕಾಲ ಚರ್ಚಿಸಿ ನ್ಯೂನ್ಯತೆ ಗಳಿದ್ದಲ್ಲಿ ಮುಕ್ತವಾಗಿ ಚರ್ಚಿಸಬಹುದು ಎಂದರು.ಫಿಜಿಕ್ಸ್, ಕೆಮಿಸ್ಟ್ರಿ, ಜಾವ, ಫೈಥನಾ ವಿಷಯಗಳು ಇನ್ನಷ್ಟು ಅವಶ್ಯವಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ ಮೇರೆಗೆ ಸದ್ಯದಲ್ಲೇ ಆನ್‍ಲೈನ್ ತರಗತಿಗಳಿಗೆ ವ್ಯವಸ್ಥೆ ಕಲ್ಪಿಸ ಲಾಗುವುದು. ಅಲ್ಲದೇ ಹಾಸ್ಟೆಲ್‍ನ ಗ್ರಂಥಾಲಯಗಳಲ್ಲಿ ಪ್ರತಿನಿತ್ಯ ಪತ್ರಿಕೆಗಳನ್ನು ಬಿಡುವಿನ ಸಮಯದಲ್ಲಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ಡೆಂಘೀ ಪ್ರಕರಣಗಳು ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಜಾಗೃತ ರಾಗಿರಬೇಕು. ನೀರು ನಿಲ್ಲುವಂತಹ ಜಾಗಗಳಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡದೇ ತಮ್ಮ ಕೆಲಸ ಕಾರ್ಯ ಗಳನ್ನು ಮುಗಿಸಿಕೊಳ್ಳಬೇಕು. ಮುಂಜಾಗ್ರತೆಯಿಂದ ತಮ್ಮ ಶೌಚಾಲಯ ಹಾಗೂ ಆವರಣಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದರು.ತದನಂತರ ವಿದ್ಯಾರ್ಥಿಗಳ ಕೊಠಡಿಗಳಿಗೆ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳು ವಿದ್ಯುತ್ ದೀಪಗಳನ್ನು ಬದಲಿಸಿ ಹೊಸದಾಗಿ ಅಳವಡಿಸಬೇಕು. ಕೊಠಡಿಗಳಲ್ಲಿ ಹಾಸಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಇದೀಯಾ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ, ಔಷಧಿಗಳ ಲಭ್ಯತೆ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ನಂತರ ಡೆಂಘೀ ಕಾಯಿಲೆ ಹರಡುತ್ತಿದ್ದು, ಮುಂಜಾಗ್ರತೆ ವಹಿಸುವಂತೆ ತಿಳಿಸಿದರು. ನಂತರ ಆಸ್ಪತ್ರೆಯಲ್ಲಿದ್ದ ರೋಗಿಗಳೊಂದಿಗೆ ಚರ್ಚಿಸಿ, ಅವರಿಗೆ ಅಗತ್ಯ ಚಿಕಿತ್ಸೆ ಲಭಿಸುತ್ತಿದೆ ಎಂಬ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಶ್ವತ್‌ಬಾಬು ಹಾಗೂ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.ಪೋಟೋ ಪೈಲ್ ನೇಮ್ 15 ಕೆಸಿಕೆಎಂ 1ಚಿಕ್ಕಮಗಳೂರಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಅವರು ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.