ಸಾರಾಂಶ
ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಶಾಸಕ ಕೆ.ಎಂ. ಉದಯ್ ಉದ್ಘಾಟಿಸುವರು. ಡಾ. ಬಿ.ಕೃಷ್ಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮಾತನಾಡಲಿದ್ದಾರೆ ಎಂದರು.
ಮದ್ದೂರು: ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜಯಂತ್ಯುತ್ಸವದ ಅಂಗವಾಗಿ ಜ.18ರಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ಬಿಜಿಎಸ್ ಆಡಳಿತ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ ಹೇಳಿದರು.
ಪಟ್ಟಣದ ಶಿವಪುರದ ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಚುಂಚಶ್ರೀ ಗೆಳೆಯರ ಬಳಗ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಸಹಯೋಗದಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ಸಾಹಿತಿ ತೈಲೂರು ವೆಂಕಟಕೃಷ್ಣ ಅವರು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಶಾಸಕ ಕೆ.ಎಂ. ಉದಯ್ ಉದ್ಘಾಟಿಸುವರು. ಡಾ. ಬಿ.ಕೃಷ್ಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ ಪ್ರಶಸ್ತಿ ಪುರಸ್ಕೃತರನ್ನು ಕುರಿತು ಮಾತನಾಡಲಿದ್ದಾರೆ ಎಂದರು.
ಅತಿಥಿಗಳಾಗಿ ಒಕ್ಕಲಿಗರ ಸಂಘದ ಖಜಾಂಚಿ ನಲ್ಲಿಗೆರೆ ಬಾಲು, ಜಿಪಂ ಮಾಜಿ ಅಧ್ಯಕ್ಷ ಬಿ.ವಿವೇಕಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಎಚ್. ಕಾಳಿರಯ್ಯ, ಪುರಸಭಾಧ್ಯಕ್ಷೆ ಕೋಕಿಲ ಅರುಣ್ ಭಾಗವಹಿಸುವರು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಚುಂಚಶ್ರೀ ಗೆಳೆಯರ ಬಳಗದ ಗೌರವಾಧ್ಯಕ್ಷ ಎಚ್.ಆರ್. ಅನಂತೇಗೌಡ, ಕಾರ್ಯದರ್ಶಿ ವಿ. ಟಿ.ರವಿಕುಮಾರ್, ಉಪಾಧ್ಯಕ್ಷ ಶಂಕರಯ್ಯ, ಸಿ ಕೆ ರಾಮಕೃಷ್ಣ ಮತ್ತಿತರರು ಇದ್ದರು.