ಮತಗಟ್ಟೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

| Published : Mar 20 2024, 01:23 AM IST

ಮತಗಟ್ಟೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಮೂಲಭೂತ ಸೌಕರ್ಯಗಳಾದ ವಿದ್ಯುತ್, ಶೌಚಾಲಯಗಳ ಸ್ಥಿತಿಗತಿ ಪರೀಶಿಲಿಸಿದರು.

ಕನ್ನಡಪ್ರಭ ವಾರ್ತೆ ಕೊಡೇಕಲ್

ಲೋಕಸಭಾ ಚುನಾವಣೆ ಹಾಗೂ ಸುರಪುರ ಶಾಸಕ ದಿ. ವೆಂಕಟಪ್ಪನಾಯಕ ಅವರ ನಿಧನದಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ವ್ಯಾಪ್ತಿಯ ಕೊಡೇಕಲ್ ವಲಯದ ಮತಗಟ್ಟೆಗಳಿಗೆ ಮಂಗಳವಾರದಂದು ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅವರು ಭೇಟಿ ನೀಡಿ ಪರೀಶಿಲನೆ ನಡೆಸಿದರು.

ವಲಯದ ಹೊರಟ್ಟಿ, ಹಗರಟಗಿ, ಕೊಡೇಕಲ್, ಬೈಲಕುಂಟಿ, ಬರದೇವನಾಳ, ಯರಕಿಹಾಳ ಹಾಗೂ ಸೂಕ್ಷ್ಮ ವಲಯದ ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಮೂಲಭೂತ ಸೌಕರ್ಯಗಳಾದ ವಿದ್ಯುತ್, ಶೌಚಾಲಯಗಳ ಸ್ಥಿತಿಗತಿ ಪರೀಶಿಲಿಸಿ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯವಿರುವ ಮತಗಟ್ಟೆಗಳಲ್ಲಿ ಬೇಗನೆ ಸೂಕ್ತವ್ಯವಸ್ಥೆ ಕಲ್ಪಿಸಿ ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಹಗರಟಗಿ ಚೆಕ್ ಪೋಸ್ಟ್ ಭೇಟಿ ನೀಡಿ ಮಾತನಾಡಿದ ಅವರು, ಚೆಕ್‌ಪೋಸ್ಟ್ ಕುರಿತು ಸಮಗ್ರ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಚೆಕ್‌ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆ ಏಕಕಾಲದಲ್ಲಿ ನಡೆಯುವುದರಿಂದ ಚೆಕ್‌ಪೋಸ್ಟ್ ಕೇಂದ್ರದಲ್ಲಿ ಸದಾ ಜಾಗೃತರಾಗಿರಬೇಕು. ನೀತಿ ಸಂಹಿತೆ ಜಾರಿಯಾಗಿದ್ದರಿಂದ ದ್ವಿಚಕ್ರ ವಾಹನ ಸೇರಿದಂತೆ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕೆಂದು ತಿಳಿಸಿದರು.

ಏನೇ ಸಮಸ್ಯೆ ಇದ್ದರೆ ಗೊಂದಲಕ್ಕಿಡಾಗದೇ ಮೇಲಾಧಿಕಾರಿಗಳಿಗೆ ಅಥವಾ ಸಂಬಂಧಿಸಿದ ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಸಲಹೆ ಪಡೆದು ಕಾರ್ಯನಿರ್ವಹಿಸಬೇಕು. ಹಾಗೆಯೇ ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನೆರಳಿನ ವ್ಯವಸ್ಥೆ ಮಾಡಲಾಗುವುದಾಗಿ ತಿಳಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಹಾಗೂ ಸುರಪುರ ವಿಧಾನಸಭೆ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಚುನಾವಣಾ ನಿಮಿತ್ತ ಈಗಾಗಲೇ ಅಧಿಕಾರಿಗಳು ಸರ್ವರೀತಿಯಲ್ಲಿ ಸನ್ನದ್ಧಗೊಂಡಿದ್ದು, ರಾಯಚುರು ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆಗೆ ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಸಿದ್ಧರಾಗಿದ್ದು, ಸೂಸೂತ್ರವಾಗಿ ಎಲ್ಲಡೆ ಮತದಾನ ನಡೆಯಲು ಸಕಲ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.

ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜಯ್ಯ ಸ್ವಾಮಿ ಹಿರೇಮಠ, ಹುಣಸಗಿ ಸಿ.ಪಿ.ಐ. ಸಚಿನ್ ಚೆಲುವಾದಿ, ಕೊಡೇಕಲ್ ಉಪತಹಸೀಲ್ದಾರ್ ಕಲ್ಲಪ್ಪ ಜಂಗಿನಗಡ್ಡಿ, ಕಂದಾಯ ನೀರಿಕ್ಷಕ ಶಾಂತಗೌಡ ಬಿರಾದಾರ್, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.