ಎಸ್ಸಿ-ಎಸ್ಟಿ ಅನುದಾನ ನೂರರಷ್ಟು ಬಳಸಲು ಡಿಸಿ ಸೂಚನೆ

| Published : Dec 21 2023, 01:16 AM IST

ಎಸ್ಸಿ-ಎಸ್ಟಿ ಅನುದಾನ ನೂರರಷ್ಟು ಬಳಸಲು ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ವಾರ್ತೆ ಧಾರವಾಡ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆ ಅನುಸಾರ ಬಳಕೆ ಮಾಡಿ ನೂರರಷ್ಟು ಪ್ರಗತಿ ಸಾಧಿಸಿ, ಅಧಿಕಾರಿಗಳು ವರದಿ ನೀಡಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಧಾರವಾಡ

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆ ಅನುಸಾರ ಬಳಕೆ ಮಾಡಿ ನೂರರಷ್ಟು ಪ್ರಗತಿ ಸಾಧಿಸಿ, ಅಧಿಕಾರಿಗಳು ವರದಿ ನೀಡಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಪ್ರಸಕ್ತ ಸಾಲಿನ ನವೆಂಬರ್-2023ರ ಅಂತ್ಯದ ವರೆಗಿನ ಧಾರವಾಡ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿದ ಅವರು, ಕೆಲವು ಅಧಿಕಾರಿಗಳು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಉದಾಸೀನತೆ ತೋರುತ್ತಿದ್ದಾರೆ. ಸಭೆಗೆ ಸರಿಯಾದ ಪ್ರಗತಿ ಮಾಹಿತಿ ಸಲ್ಲಿಸಿಲ್ಲ. ಕೆಲವರು ತಮ್ಮ ಕಚೇರಿ ಸಿಬ್ಬಂದಿಗಳನ್ನು ಕಳುಹಿಸಿದ್ದಾರೆ. ಸಭೆಗೆ ಗೈರಾದವರಿಗೆ ನೋಟಿಸ್ ನೀಡಿ, ಉತ್ತರ ಪಡೆಯಲು ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಈ ಉಪಯೋಜನೆಗಳಡಿ ಬಿಡುಗಡೆ ಆಗಿರುವ ಮೊದಲ ಕಂತಿನ ಅನುದಾನವನ್ನು ಪೂರ್ಣವಾಗಿ ಬಳಸದಿರುವುದು ಕಂಡುಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಎಸ್.ಸಿ.ಎಸ್.ಎ. ಮತ್ತು ಟಿ.ಎಸ್.ಎ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿಷ್ಕಾಳಜಿ ತೋರುವ ಅಧಿಕಾರಿಗಳ ಮೇಲೆ ನಿಯಮಾನುಸಾರ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜರುಗಿಸಿದ ಜಿಲ್ಲಾಧಿಕಾರಿಗಳು, ಜಾತಿ ನಿಂದನೆ, ದೌರ್ಜನ್ಯ ಹಾಗೂ ಇತರ ಪ್ರಕರಣ, ಸಮಸ್ಯೆಗಳ ಕುರಿತು ಸಮಿತಿ ಸದಸ್ಯರೊಂದಿಗೆ ಚರ್ಚಿಸಿ, ಪರಿಹಾರ ಕ್ರಮ ಜರುಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು. ಉಪ ಪೊಲೀಸ್ ಆಯುಕ್ತ ರಾಜೀವ್ ಎಂ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಬರಮನಿ, ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳರ ಇದ್ದರು. ಸಮಾಜ ಕಲ್ಯಾಣ ಇಲಾಖೆ ಅಪರ ನಿರ್ದೇಶಕ ಅಲ್ಲಾಭಕಾಷ್ ಎಂ.ಎಸ್. ಸ್ವಾಗತಿಸಿದರು.