ಸಾರಾಂಶ
ಭೂಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳ ಗುಚ್ಛಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಸಮಿತಿಯ ಸದಸ್ಯರೊಂದಿಗೆ ಸಮನ್ವಯಗೊಳಿಸಿಗೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಭೂಕುಸಿತ ಅಧ್ಯಯನ ವರದಿಗಳಲ್ಲಿ ಸೂಚಿಸಿರುವಂತೆ ಮಾರ್ಗಸೂಚಿಗಳನ್ನು ಹಾಗೂ ತಜ್ಞರ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನ ಮಾಡಿಕೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿ ಭೂಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳ ಗುಚ್ಛಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಭೂಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸಮಿತಿ ರಚಿಸಿರುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಸಮಿತಿ ರಚಿಸಿದ್ದು, ಜಿಲ್ಲೆಯಲ್ಲಿ ಈಗಾಗಲೇ ಭೂಕುಸಿತ ಉಂಟಾಗಬಹುದಾದ ೨೩ ಸ್ಥಳಗಳನ್ನು ಗುರುತಿಸಲಾಗಿದೆ. ಸದರಿ ಸ್ಥಳಗಳಲ್ಲಿ ಉಂಟಾಗಬಹುದಾದ ಭೂಕುಸಿತ ತಡೆಗಟ್ಟಲು ಕ್ರಿಯಾ ಯೋಜನೆ ಪಟ್ಟಿ ತಯಾರಿಸಿ ಸಲ್ಲಿಸಲು ಅಧಿಕಾರಿ ಮತ್ತು ನೌಕರರ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಸಮಿತಿಯ ಸದಸ್ಯರೊಂದಿಗೆ ಸಮನ್ವಯಗೊಳಿಸಿಗೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಭೂಕುಸಿತ ಅಧ್ಯಯನ ವರದಿಗಳಲ್ಲಿ ಸೂಚಿಸಿರುವಂತೆ ಮಾರ್ಗಸೂಚಿಗಳನ್ನು ಹಾಗೂ ತಜ್ಞರ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನ ಮಾಡಿಕೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ತಿಳಿಸಿದರು.ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜ್‌ಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಮತ್ತಿತರರು ಸಭೆಯಲ್ಲಿ ಹಾಜರಿದ್ದರು.