ಚಿಕ್ಕಮಗಳೂರುಕೊಪ್ಪ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಭನ್ವರ್‌ ಸಿಂಗ್‌ ಮೀನಾ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

-ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದ ಕಸ, ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ, ಪರಿಶೀಲನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕೊಪ್ಪ ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಭನ್ವರ್‌ ಸಿಂಗ್‌ ಮೀನಾ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಸ್ವಚ್ಛ ಭಾರತ ಮಿಷನ್ ನಿಯಮ-೨೦೨೬ ರಂತೆ ಕಸ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಟ್ರೋಮರ್‌ ಗಳನ್ನು ಬಳಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.ಕಗ್ಗ ಗ್ರಾಮದ ಸರ್ವೆ ನಂ ೩೪ ಮತ್ತು ೩೬ ರಲ್ಲಿ ಅರಣ್ಯ/ಕಂದಾಯ ಭೂಮಿಯ ಜಂಟಿ ಸರ್ವೆ ಬಗ್ಗೆ ಪರಿಶೀಲನೆ ನಡೆಸಿ ಸರ್ವೇ ಪೂರ್ಣಗೊಳಿಸುವಂತೆ ಹೇಳಿದರು. ನಂತರ ಕೊಪ್ಪದ ಪ್ರಜಾಸೌಧ ಸಭಾಂಗಣದಲ್ಲಿ ಕೊಪ್ಪ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ವೇಳೆ ಮಾತನಾಡಿ ಬೆಳೆವಿಮೆ ಫಸಲು ಬಿಮಾ ಯೋಜನೆ ಪ್ರಗತಿ ಕುಂಠಿತವಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಪ್ರಗತಿ ಚುರುಕು ಗೊಳಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಬೆಳೆಹಾನಿ ಸಮೀಕ್ಷೆ ವರದಿ ಕೂಡಲೇ ಸಲ್ಲಿಸಲು ಸೂಚಿಸಿ, ಕೊಪ್ಪದಿಂದ ಚಿಕ್ಕಮಗಳೂರು ರಸ್ತೆ ದುರಸ್ತಿ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.ಮನೆ, ಸೇತುವೆ, ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಹಾನಿ ಕುರಿತು ಜಿಪಿಎಸ್ ಅಳವಡಿಸಿರುವ ಫೋಟೋಗಳ ಸಹಿತ ಅಂದಾಜು ಪಟ್ಟಿಯೊಂದಿಗೆ ವರದಿ ಮಾಡಲು ತಿಳಿಸಿದರು.ಹೊಸ ಕೆಪಿಎಸ್‌ಸಿ ಶಾಲೆಯನ್ನು ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರಾರಂಭಿಸುವ ಬಗ್ಗೆ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕ್ರಮಬದ್ಧವಾಗಿಸಬೇಕು. ದುರಸ್ತಿಯಲ್ಲಿರುವ ಶಾಲಾ ಕಟ್ಟಡಗಳ ಬಗ್ಗೆ ಪ್ರಸ್ತಾವನೆ ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವಂತೆ ತಿಳಿಸಿದರುಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಪ್ರಸ್ತಾವನೆ ಮಂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ಈ ಕುರಿತು ಆರೋಗ್ಯ ಇಲಾಖೆ ಆಯುಕ್ತರೊಂದಿಗೆ ಚರ್ಚಿಸುವುದಾಗಿ ಹೇಳಿದರು. ಕೊಪ್ಪ ತಾಲೂಕು ಆಸ್ಪತ್ರೆ ವೈದ್ಯರ ಹುದ್ದೆ ಎಂ.ಬಿ.ಬಿ.ಎಸ್ ವೈದ್ಯರು ಪ್ರಸ್ತಾವನೆ ಸಲ್ಲಿಸಿದಲ್ಲಿ ನೇಮಕಾತಿ ಮಾಡಲು ಕ್ರಮವಹಿಸಲಾಗುವುದಾಗಿ ವಿದ್ಯಾರ್ಥಿ ನಿಲಯದಲ್ಲಿ ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ಮಾಡುವಂತೆ ಕ್ರಮ ವಹಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು.

ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಹಾನಿಗೆ ಒಳಗಾದಲ್ಲಿ ತುರ್ತು ಕ್ರಮ ವಹಿಸಬೇಕು. ತಾಪಂ ಕಾರ್ಯ ನಿರ್ವಹಣಾಧಿ ಕಾರಿ ಭಾರತ್ ಜೋಡೋ ಕಾರ್ಯಕ್ರಮ ಸಂಘ ರಚನೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಆರಣ್ಯ ಹಾಗೂ ಭೂ ದಾಖಲೆಗಳ ಇಲಾಖೆಗಳು ಜಂಟಿ ಸರ್ವೆಯಲ್ಲಿ ಪ್ರಗತಿ ಸಾಧಿಸುವಂತೆ ಹೇಳಿದರು.

ಬೆಳಗೊಳ ಗ್ರಾಮ ಆರ್ಡಿ ಕೊಪ್ಪ, ನದಿ ಪ್ರವಾಹದಿಂದ ಭೂಮಿ ಕೊರೆತ ಉಂಟಾಗುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಪುಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ತಿಳಿಸಿದರು.ಈ ವೇಳೆ ಕೊಪ್ಪ ತಹಸೀಲ್ದಾರ್ ಲಿಖಿತಾ ಮೋಹನ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ದಿನೇಶ್ ಇದ್ದರು.