ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಲತಾಕುಮಾರಿ ಭೇಟಿ ನೀಡಿ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಕುರಿತು ಸ್ಥಳದಲ್ಲೇ ಪರಿಶೀಲನೆ ನಡೆಸಿದರು. ಮೂಲಭೂತ ಸೌಕರ್ಯಗಳ ಕೊರತೆ, ಶೌಚಾಲಯ ನಿರ್ವಹಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕಸದ ತ್ಯಾಜ್ಯ ನಿರ್ವಹಣೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ, ಅಗತ್ಯವಿರುವ ಕಡೆಗಳಲ್ಲಿ ತಕ್ಷಣ ಸುಧಾರಣೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೇಲೂರುಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಲತಾಕುಮಾರಿ ಭೇಟಿ ನೀಡಿ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಪಿಸಲಾಗಿರುವ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕ ಶೌಚಾಲಯಗಳು ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಕುರಿತು ಸ್ಥಳದಲ್ಲೇ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಸಮರ್ಪಕವಾಗಿದೆಯೇ, ಭಕ್ತರಿಗೆ ಯಾವುದೇ ಅಸೌಕರ್ಯ ಉಂಟಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. ಜೊತೆಗೆ ಸಾರ್ವಜನಿಕ ಶೌಚಾಲಯಗಳ ಸ್ವಚ್ಛತೆ, ನೀರಿನ ಲಭ್ಯತೆ, ನಿರ್ವಹಣೆಯ ಸ್ಥಿತಿ ಬಗ್ಗೆ ಮಾಹಿತಿ ಪಡೆದು, ಅಗತ್ಯವಿರುವ ಕಡೆಗಳಲ್ಲಿ ತಕ್ಷಣ ಸುಧಾರಣೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆ ಮೂಲಭೂತ ಸೌಕರ್ಯಗಳು ಉತ್ತಮವಾಗಿರಬೇಕು. ವಿಶೇಷವಾಗಿ ಹಬ್ಬಗಳು ಹಾಗೂ ಪ್ರವಾಸಿಗರು ಹೆಚ್ಚಾಗುವ ದಿನಗಳಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಮಾತನಾಡಿದ ಪ್ರತಿ ಮಂಗಳವಾರ ದಿನದಂದು ಒಂದೊಂದು ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ. ಅದರಂತೆ ದೇಗುಲಕ್ಕೆ ಭೇಟಿ ನೀಡಿದ್ದು ಮೂಲಭೂತ ಸೌಕರ್ಯಗಳ ಕೊರತೆ, ಶೌಚಾಲಯ ನಿರ್ವಹಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕಸದ ತ್ಯಾಜ್ಯ ನಿರ್ವಹಣೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಅದರಂತೆ ಇಲ್ಲಿ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲು ಹಾಗೂ ಭಕ್ತರಿಗೆ ಪ್ರವಾಸಿಗಳಿಗೆ ಯಾವುದೇ ರೀತಿ ಅನಾನುಕೂಲವಾಗದಂತೆ ಅವರಿಗೆ ಬೇಕಾದ ಸೌಕರ್ಯಗಳನ್ನು ನೀಡಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದು ಪಾರ್ಕಿಂಗ್ ಹಿಂದುಗಡೆ ಇರುವ ಜಾಗವನ್ನು ಪರಿಶೀಲಿಸಿ ಅಲ್ಲಿ ಒಂದು ಹೆಚ್ಚುವರಿಯಾಗಿ ಶೌಚಾಲಯ ಬೇಕಾಗಿದೆ. ಈಗ ಇರುವ ಶೌಚಾಲಯದ ನಿರ್ವಹಣೆ ಸಮಯ ಬದಲಾವಣೆ ಕುರಿತು ಸ್ಪಷ್ಟವಾಗಿ ವಿವರಿಸಿದ್ದೇನೆ ಎಂದು ತಿಳಿಸಿದರು.ಅಮಾನತು: ಬೇಲೂರು ದೇವಸ್ಥಾನ ಮುಂಭಾಗ ಇರುವ ಶೌಚಾಲಯ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕರೆದು ತರಾಟೆಗೆ ತೆಗೆದುಕೊಂಡು ಕೂಡಲೇ ಮಹಿಳೆಯರ ಶೌಚಾಲಯದಲ್ಲಿ ಪ್ರತ್ಯೇಕತೆ ಇಲ್ಲದೆ ಇರುವುದನ್ನು ಗಮನಿಸಿ ಕಾರ್ಯನಿರ್ವಹಿಸುತ್ತಿರುವ ಇಬ್ಬರನ್ನು ಅಮಾನತುಗೊಳಿಸಲು ಸೂಚಿಸಿದರು. ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆಯನ್ನು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ , ದೇವಸ್ಥಾನ ಕಾರ್ಯನಿರ್ವಹಣಾ ಅಧಿಕಾರಿ ಯೋಗೀಶ್ ಪುರಸಭೆ ಅಧ್ಯಕ್ಷ ಉಷಾ ಸತೀಶ್, ಸೌಮ್ಯ ಆನಂದ್, ಪುರಸಭೆ ಸದಸ್ಯರು ವೃತ ನಿರೀಕ್ಷಕ ರೇವಣ್ಣ ಸಕಲೇಶಪುರ ಉಪ ವಿಭಾಗಾಧಿಕಾರಿ ರಾಜೇಶ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಇದೇ ವೇಳೆವಈಗಿರುವ ಸೌಕರ್ಯಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದರು.