ಜಿಲ್ಲಾಮಟ್ಟದ ಯುವ ಜನೋತ್ಸವದ ಸಿದ್ಧತೆಗೆ ಡಿಸಿ ಸೂಚನೆ

| Published : Nov 18 2024, 12:02 AM IST

ಜಿಲ್ಲಾಮಟ್ಟದ ಯುವ ಜನೋತ್ಸವದ ಸಿದ್ಧತೆಗೆ ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: 2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.30ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ಸೂಚಿಸಿದರು.

ದೊಡ್ಡಬಳ್ಳಾಪುರ: 2024-25ನೇ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನ.30ರಂದು ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರೂ ಯುವ ಕೇಂದ್ರ ವತಿಯಿಂದ ಹಮ್ಮಿಕೊಂಡ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನ. 27ರಂದು ನಡೆಯಲಿರುವ ಯುವ ಜನೋತ್ಸವ ಸ್ಫರ್ಧೆಯಲ್ಲಿ ಜಿಲ್ಲೆಯ 15 ವರ್ಷದಿಂದ 29 ವರ್ಷ ವಯೋಮಾನದೊಳಗಿನ ಯುವಕರು ಹಾಗೂ ಯುವತಿಯರು ತಮ್ಮ ಹೆಸರು ನೋಂದಾಯಿಸಿಕೊಂಡು ಭಾಗವಹಿಸಬಹುದು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಕ್ರಮವಹಿಸಿ ಎಂದರಲ್ಲದೇ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಕಾರ್ಯ ನಿರ್ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ, ಜಿಲ್ಲಾ ನೆಹರೂ ಯುವ ಕೇಂದ್ರದ ಯುವ ಅಧಿಕಾರಿಗಳಾದ ಶ್ರೀವಾಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್‌.....

ಯುವ ಜನೋತ್ಸವ ಸ್ಪರ್ಧೆಗಳ ವಿವರ:

ಗುಂಪು ಸ್ಪರ್ಧೆಗಳು:

1. ವಿಜ್ಞಾನ ಮೇಳ (ಗುಂಪು), 2. ಜಾನಪದ ನೃತ್ಯ (ತಂಡ)– (ಕನ್ನಡ/ ಆಂಗ್ಲ/ ಹಿಂದಿ ಭಾಷೆ), 3. ಜಾನಪದ ಗೀತೆ (ತಂಡ)– (ಕನ್ನಡ/ ಆಂಗ್ಲ/ ಹಿಂದಿ ಭಾಷೆ),

ವೈಯಕ್ತಿಕ ಸ್ಪರ್ಧೆಗಳು:

1. ಜಾನಪದ ನೃತ್ಯ–(ಕನ್ನಡ/ ಆಂಗ್ಲ/ ಹಿಂದಿ ಭಾಷೆ), 2. ಜಾನಪದ ಗೀತೆ–(ಕನ್ನಡ/ ಆಂಗ್ಲ/ ಹಿಂದಿ ಭಾಷೆ), 3. ಕವಿತೆ ಬರೆಯುವುದು, 4. ಕಥೆ ಬರೆಯುವುದು (ವೈಯಕ್ತಿಕ) ಸ್ಟೋರಿ ರೈಟಿಂಗ್ (1000 ಪದಗಳು ಮೀರದಂತೆ) - (ಕನ್ನಡ/ ಆಂಗ್ಲ/ ಹಿಂದಿ ಭಾಷೆ), 5. ಚಿತ್ರ ಕಲೆ- ಕನ್ನಡ /ಆಂಗ್ಲ /ಹಿಂದಿ), 6. ಮೊಬೈಲ್ ಛಾಯಾಗ್ರಹಣ ಸ್ಪರ್ಧೆ, 7.ವಿಜ್ಞಾನ ಮೇಳ (ವೈಯಕ್ತಿಕ), 8. ಯುವ ಚಿತ್ರ ಕಲಾ ಸ್ಪರ್ಧೆ, 9. ಛಾಯಾಚಿತ್ರಣ (ವೈಯಕ್ತಿಕ), 10. ಕವನ ಬರಹಗಾರರ ಸ್ಪರ್ಧೆ

ಯುವ ಕೃತಿ: 1. ಗುಡಿ ಕೈಗಾರಿಕೆಯ ಕಲಾ ಪ್ರಕಾರ, 2. ನೇಕಾರಿಕೆ / ಜವಳಿ, 3. ಕೃಷಿ ಉತ್ಪನ್ನಗಳು. ಹೆಚ್ಚಿನ ವಿವರಗಳಿಗಾಗಿ ದೂ: 9980590960/ 8328673178 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

16ಕೆಡಿಬಿಪಿ7-

ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕುರಿತು ಪೂರ್ವಭಾವಿ ಸಭೆ ನಡೆಯಿತು.