ಅ.5ಕ್ಕೆ ಗೋಕಾಕ್‌ ಚಳವಳಿ ಸಮಾವೇಶ ಯಶಸ್ವಿಗೆ ಡಿಸಿ ಸೂಚನೆ

| Published : Sep 28 2024, 01:16 AM IST

ಸಾರಾಂಶ

DC notification for success of Gokak movement convention at 5

-ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟ ಸಮಾವೇಶದ ಪೂರ್ವಭಾವಿ ಸಭೆ

ಕನ್ನಡಪ್ರಭ ವಾರ್ತೆ ರಾಯಚೂರು

ಬರುವ ಅ.5ರಂದು ಕಲಬುರಗಿ ವಿಭಾಗ ಮಟ್ಟದ ಗೋಕಾಕ್ ಚಳವಳಿಯ ಹಿನ್ನೋಟ ಮತ್ತು ಮುನ್ನೋಟ ಸಮಾವೇಶವನ್ನು ಜಿಲ್ಲೆಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮಾವೇಶವನ್ನು ಅಚ್ಚುಕಟ್ಟಾಗಿ ನಡೆಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗೋಕಾಕ್ ಚಳವಳಿಯ ಹಿನ್ನೋಟ ಮತ್ತು ಮುನ್ನೋಟ ಸಮಾವೇಶವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾವೇಶಕ್ಕೆ ಸ್ವಾಗತ ಸಮಿತಿ, ವಸತಿ ಸಮಿತಿ, ಊಟೋಪಚಾರ ಸಮಿತಿ, ವೇದಿಕೆ ಸಮಿತಿ, ಮೆರವಣಿಗೆ ಸಮಿತಿ, ಸಾಂಸ್ಕೃತಿ ಸಮಿತಿ, ಸಾರಿಗೆ ಸಮಿತಿ, ವಿಚಾರ ಸಂಕಿರಣ, ಪ್ರಚಾರ ಸಮಿತಿ, ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ಸಮಿತಿ, ವಿದ್ಯುತ್ ಮತ್ತು ಲೈಟಿಂಗ್ ಸಮಿತಿ, ತುರ್ತು ಸೇವಾ ಸಮಿತಿ ಸೇರಿದಂತೆ 13 ಸಮಿತಿಗಳ ನೇಮಕ ಮಾಡಿದ್ದು, ಸಮಿತಿಯ ಎಲ್ಲಾ ಅಧಿಕಾರಿಗಳು ತಮ್ಮ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿಬೇಕು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ಮಾತನಾಡಿ, ಕಾರ್ಯಕ್ರಮದಲ್ಲಿ ಗೋಕಾಕ ಚಳವಳಿಯನ್ನು ಮುನ್ನಡೆಸಿದ ಹಿರಿಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ, ಅಪರ ಜಿಲ್ಲಾಧಿಕಾರಿ ಶಿವಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗೂರು ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

-------------

27ಕೆಪಿಆರ್‌ಸಿಆರ್‌ 01

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಗೋಕಾಕ್ ಚಳವಳಿಯ ಹಿನ್ನೋಟ ಮತ್ತು ಮುನ್ನೋಟ ಸಮಾವೇಶವದ ಪೂರ್ವಭಾವಿ ಸಭೆ ಡಿಸಿ ನಿತೀಶ್ ಕೆ. ಅಧ್ಯಕ್ಷತೆಯಲ್ಲಿ ನಡೆಯಿತು.