ಶೀಘ್ರ ಅಂಬೇಡ್ಕರ್ ಭವನ ದುರಸ್ತಿ ಪೂರ್ಣಗೊಳಿಸಲು ಡಿಸಿ ಸೂಚನೆ

| Published : Mar 27 2025, 01:02 AM IST

ಶೀಘ್ರ ಅಂಬೇಡ್ಕರ್ ಭವನ ದುರಸ್ತಿ ಪೂರ್ಣಗೊಳಿಸಲು ಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಚೇರಿ ಕೆಲಸದಲ್ಲಿ ಅನಗತ್ಯ ಕಾಲಹರಣ ಮಾಡುವುದು ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾವೇರಿನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ದುರಸ್ತಿ ಕೆಲಸವನ್ನು ಇನ್ನೆರಡು ದಿನಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಬುಧವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿದ ಅವರು, ಏ. 14ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಇದೇ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕೆಲಸಕ್ಕೆ ನೀಡುವ ಅತ್ಯಂತ ಅಚ್ಚುಕಟ್ಟಾಗಿ ದುರಸ್ತಿ ಕೆಲಸವನ್ನು ಮಾಡಬೇಕು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಸಂಕೀರ್ಣಕ್ಕೆ ಭೇಟಿ:ಶಿಗ್ಗಾಂವಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಂಕಿರ್ಣಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು, ಕಚೇರಿಗಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಈ ಹಿನ್ನೆಲೆ ಸಾರ್ವಜನಿಕರಿಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು. ಕಚೇರಿ ಕೆಲಸದಲ್ಲಿ ಅನಗತ್ಯ ಕಾಲಹರಣ ಮಾಡುವುದು ಕಂಡು ಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಚೇರಿಯಲ್ಲಿ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕೂಡಲೇ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು. ಕಚೇರಿ ಹಾಗೂ ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಸೂಚನೆ ನೀಡಿದರು.

ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ನಗರದ ವಿವಿಧ ಪಾನ್‌ಶಾಪ್‌ಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.

ಪರವಾನಗಿ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ- ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ- ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ ಅಡಿಯಲ್ಲಿ 17 ಪ್ರಕರಣಗಳಿಂದ ₹1,550 ದಂಡ ವಸೂಲಿ ಮಾಡಲಾಗಿದೆ. ತಂಬಾಕು ಜಾಹೀರಾತು ಮಾಡುವ ಆರು ಫಲಕಗಳನ್ನು ತೆರವುಗೊಳಿಸಲಾಗಿದೆ.ಈ ತನಿಖಾ ದಾಳಿ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ. ಸಂತೋಷ ದಡ್ಡಿ, ಸಮಾಜ ಕಾರ್ಯಕರ್ತ ದಾದಾಪೀರ ಹುಲಿಕಟ್ಟಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅಮೃತಗೌಡ ಪಾಟೀಲ, ತಾಲೂಕು ಆರೋಗ್ಯಾಧಿಕಾರಿಗಳು ಇತರರು ಉಪಸ್ಥಿತರಿದ್ದರು.