ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮೀ, ಭಾಗ್ಯಜ್ಯೋತಿ, ಅನ್ನಭಾಗ್ಯ, ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳೂ ಸೇರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಗ್ರಾಮೀಣ ಬಡವರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಕೊರಟಗೆರೆ

ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಲಾಗಿದೆ. ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಮಾಡುವುದೇ ಈ ಪ್ರದರ್ಶನದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಶಕ್ತಿ, ಗೃಹಲಕ್ಷ್ಮೀ, ಭಾಗ್ಯಜ್ಯೋತಿ, ಅನ್ನಭಾಗ್ಯ, ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳೂ ಸೇರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಗ್ರಾಮೀಣ ಬಡವರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದ ಬಹುತೇಕ ಜನರು ಸರ್ಕಾರದ ಒಂದಿಲ್ಲೊಂದು ಯೋಜನೆ ಫಲಾನುಭವಿಯಾಗಿದ್ದಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳ ಮಾಹಿತಿ ಮಳಿಗೆ ಸ್ಥಾಪಿಸಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದರು.

ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಗೋಪಿನಾಥ್, ಪಪಂ ಮಾಜಿ ಸದಸ್ಯ ಓಬಳರಾಜ್, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಸೀಲ್ದಾರ್ ಮಂಜುನಾಥ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಅನಂತರಾಮು, ಪಪಂ ಮುಖ್ಯಾಧಿಕಾರಿ ಉಮೇಶ್, ಸೇರಿ ಇತರರು ಇದ್ದರು.