ಸಾರಾಂಶ
ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಕನ್ನಡತಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ‘ಲಯನ್ಸ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಕನ್ನಡತಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ‘ಲಯನ್ಸ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಪ್ರಶಸ್ತಿ ಪ್ರದಾನ ಮಾಡಿದರು.ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪಾ, ಸುಶಿಕ್ಷಿತ ಸದಸ್ಯರನ್ನು ಒಳಗೊಂಡ ಲಯನ್ಸ್ ಕ್ಲಬ್ ಇಂಟರ್ ನ್ಯಾಶನಲ್ ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್ಆರ್) ವ್ಯವಸ್ಥೆ ಜಾರಿಗೆ ಬರುವ ಮೊದಲೇ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದನ್ನು ಶ್ಲಾಘಿಸಿದರು.ಮಾಜಿ ಜಿಲ್ಲಾ ಗವರ್ನರ್ ಡಾ. ಎ. ರವೀಂದ್ರನಾಥ್ ಶೆಟ್ಟಿ, ಕಾರ್ಯದರ್ಶಿ ಡಾ. ರೋಶನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ರಮಾನಂದ ಎಲ್. ನಾಯಕ್, ಜೊತೆ ಕಾರ್ಯದರ್ಶಿ ಪ್ರಕಾಶ್ ಎಂ.ಡಿ. ಭಟ್, ಲಯನ್ ಲೇಡಿ ಕೌನ್ಸಿಲಿನ ಕಾರ್ಯದರ್ಶಿ ರಾಧಿಕಾ ಶೆಣೈ, ಕೋಶಾಧಿಕಾರಿ ಸುಜಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಲಯನ್ಸ್ ಸದಸ್ಯ ಡಾ. ಶೇಖ್ ವಹೀದ್ ದಾವೂದ್ ಅವರನ್ನು ಗೌರವಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))