ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಬಗ್ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಬಸವನಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಬಗ್ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಈ ವೇಳೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಕಾಧಿಕಾರಿ ರಿಷಿ ಆನಂದ, ಬಸವನ ಬಾಗೇವಾಡಿ ತಹಸೀಲ್ದಾರ್ ವೈ.ಎಸ್. ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಸೇರಿದಂತೆ ಮುಂತಾದವರು ಇದ್ದರು.