ಭೀಮಾ ಬ್ಯಾರೇಜ್‌ಗೆ ಡಿಸಿ ತರನ್ನುಮ್ ಭೇಟಿ

| Published : Jul 30 2024, 12:32 AM IST

ಸಾರಾಂಶ

ಎರಡು ದಿನಗಳ ಹಿಂದೆ ಮಹಾರಾಷ್ಟ್ರದ ವೀರಭಟ್ಕರ್ ಜಲಾಶಯದಿಂದ 60 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಬಿಟ್ಟಿದ್ದಾರೆ. ಅದಾದ ಬಳಿಕ ನೀರು ಬಿಟ್ಟಿಲ್ಲ, ಭೀಮಾ ನದಿಯಲ್ಲಿ ಹೆಚ್ಚಿನ ನೀರಿನ ಹರಿವು ಆಗುತ್ತಿದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಚವಡಾಪುರ

ಮಹಾರಾಷ್ಟ್ರದಲ್ಲಿ ಉಂಟಾಗುತ್ತಿರುವ ಭಾರಿ ಮಳೆಯಿಂದಾಗಿ ಅಲ್ಲಿನ ಜಲಾಶಯಗಳು ಭರ್ತಿಯಾಗುತ್ತಿದ್ದು ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಬಿಡುತ್ತಿರುವುದರಿಂದ ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು ಅಫಜಲ್ಪುರ ತಾಲೂಕಿನ ಸೊನ್ನ ಗ್ರಾಮದಲ್ಲಿನ ಭೀಮಾ ಏತ ನೀರಾವರಿ ಬ್ಯಾರೇಜ್‌ಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಭೇಟಿ ನೀಡಿ ಕೆಎನ್‌ಎನ್‌ಎಲ್ ಅಧಿಕಾರಿಗಳಿಂದ ನೀರಿನ ಮಾಹಿತಿ ಪಡೆದುಕೊಂಡರು.

ಕೆಎನ್‌ಎನ್‌ಎಲ್ ಅಧಿಕಾರಿ ಸಂತೋಷ ಸಜ್ಜನ್ ಮಾಹಿತಿ ನೀಡಿ ಎರಡು ದಿನಗಳ ಹಿಂದೆ ಮಹಾರಾಷ್ಟ್ರದ ವೀರಭಟ್ಕರ್ ಜಲಾಶಯದಿಂದ 60 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಬಿಟ್ಟಿದ್ದಾರೆ. ಅದಾದ ಬಳಿಕ ನೀರು ಬಿಟ್ಟಿಲ್ಲ, ಭೀಮಾ ನದಿಯಲ್ಲಿ ಹೆಚ್ಚಿನ ನೀರಿನ ಹರಿವು ಆಗುತ್ತಿದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರವಾಹ ಪರಿಸ್ಥಿತಿ ಉಂಟಾದರೆ ಎದುರಿಸಲು ತಾಲೂಕು ಆಡಳಿತ, ಇಲಾಖೆಗಳು, ಗ್ರಾಮ ಪಂಚಾಯಿತಿಗಳು ಸಿದ್ದವಾಗಿರಬೇಕು. ಎಲ್ಲಾ ರೀತಿಯ ಸಹಕಾರ ನೀಡಲು ಜಿಲ್ಲಾಡಳಿತ ಸಿದ್ದವಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ತಿಳಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ ಸಂಜೀವಕುಮಾರ ದಾಸರ್ ಹಾಗೂ ಕೆಎನ್‌ಎನ್‌ಎಲ್ ಅಧಿಕಾರಿಗಳು ಇದ್ದರು.