ಮಂಚನಬೆಲೆ ಜಲಾಶಯಕ್ಕೆ ಡಿಸಿ ಭೇಟಿ: ಪರಿಶೀಲನೆ

| Published : Oct 23 2024, 01:48 AM IST

ಸಾರಾಂಶ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಇದೀಗ ಮಂಚನಬೆಲೆ ಜಲಾಶಯಕ್ಕೆ 2000 ಕ್ಯುಸೆಕ್ ನೀರಿನ ಒಳ ಹರಿವಿದ್ದು, 4000 ಕ್ಯುಸೆಕ್ ಹೊರ ಹರಿವಿದೆ. ಜಲಾಶಯದ ಮೇಲ್ಬಾಗದಲ್ಲಿ ಹೆಚ್ಚು ಮಳೆಯಾದರೆ ಮತ್ತಷ್ಟು ನೀರು ಜಲಾಶಯಕ್ಕೆ ಹರಿದು ಬರುವ ಕಾರಣ ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸಿ, ನೀರಿನ ಮಟ್ಟವನ್ನು ಪರಿಶೀಲಿಸುತ್ತಿರಬೇಕು ಹಾಗೂ ಈ ಬಗ್ಗೆ ತಮಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ಮಂಚನಬೆಲೆ ಜಲಾಶಯದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಹುಮೇರಾ ಹಷ್ಮಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಶಂಕರ್, ಮಾಗಡಿ ಸಬ್ ಇನ್ಸ್ ಪೆಕ್ಟರ್ ಮೋಹನ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

22ಕೆಆರ್ ಎಂಎನ್ 5.ಜೆಪಿಜಿ

ಮಂಚನಬೆಲೆ ಜಲಾಶಯಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಪರಿಶೀಲನೆ ನಡೆಸಿದರು.