ರಾಯಚೂರು ಸ್ಥಳೀಯ ಜಹೀರಾಬಾದ್‌ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭಾನುವಾರ ಮೃತ ಬಾಲಕರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಗರದ ಎಂ.ಈರಣ್ಣ ವೃತ್ತದಲ್ಲಿ ನಡೆದಿದ್ದ ಮೆರವಣಿಗೆಯ ವೇಳೆ ಸಂಭವಿಸಿದ ದುರಂತದ ಕುರಿತು ಕುಟುಂಬಸ್ಥ ರಿಂದ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಮಾಹಿತಿ ಪಡೆದರು. ನಡೆಯಬಾರದ ಘಟನೆ ನಡೆದಿದ್ದು, ಕುಟುಂಬದ ನೋವು ಅರ್ಥವಾಗುತ್ತದೆ ಎಂದು ಹೇಳಿ ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಸೇರಿದಂತೆ ಲಭ್ಯವಿರುವ ನೆರವು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕುಟುಂಬಗಳಿಗೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು. ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ದೊರಕಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಈ ವೇಳೆ ತಹಸೀಲ್ದಾರ್ ಸುರೇಶ ವರ್ಮಾ, ಜೋನಲ್ ಆಯುಕ್ತ ಮಲ್ಲಿಕಾರ್ಜುನ, ಮುಖಂಡ ರವೀಂದ್ರ ಜಲ್ದಾರ್, ಗಜಾನನ ಮಂಡಳಿಗಳ ಪದಾಧಿಕಾರಿಗಳು,ವಿವಿಧ ಸಂಘಟನೆಗಳ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.